Advertisement

ಕ್ರೀಡಾಪಟುಗಳ ಪ್ರತಿಭೆಗೆ ಪ್ರೋತ್ಸಾಹ

07:18 PM Sep 07, 2022 | Team Udayavani |

ಔರಾದ: ಶಾಲಾ ಹಂತದಲ್ಲಿಯೇ ಕ್ರೀಡಾಪಟುಗಳ ಪ್ರತಿಭೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಗತ್ಯ ಸಹಾಯ ಸಹಕಾರ ನೀಡುವುದು ಸೂಕ್ತವಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.

Advertisement

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರುತಿಸುವ ಕೆಲಸ ನಡೆಯಬೇಕಿದೆ. ಆ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ದೊರೆತಲ್ಲಿ ಉನ್ನತ ಸಾಧನೆ ಮಾಡಬಹುದು. ತಾಲೂಕು ಕೇಂದ್ರ ಔರಾದ್‌ ಪಟ್ಟಣದಲ್ಲಿ ಶಾಲಾ ಮಕ್ಕಳು ಸೇರಿದಂತೆ ಎಲ್ಲ ರೀತಿಯ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕ್ರೀಡಾಂಗಣ ಅಭಿವೃದ್ಧಿಗೊಳಿಸಲಾಗುತ್ತಿದೆ. ಗಡಿ ಭಾಗದಲ್ಲಿರುವ ಕ್ರೀಡಾ ಪ್ರತಿಭೆಗಳ ಸಾಧನೆಗೆ ಕ್ರೀಡಾಂಗಣ ವೇದಿಕೆಯಾಗಬೇಕೆಂಬುದು ನನ್ನ ಆಶಯವಾಗಿದ್ದು, ಕ್ರೀಡಾಂಗಣ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಸಹಕಾರಕ್ಕೆ ಸದಾ ಬದ್ಧ ಎಂದರು.

ತಹಶೀಲ್ದಾರ್‌ ಅರುಣಕುಮಾರ್‌ ಕುಲಕರ್ಣಿ, ತಾಪಂ ಇಒ ಬೀರೇಂದ್ರಸಿಂಗ್‌ ಠಾಕೂರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌. ನಗನೂರ್‌, ದೈಹಿಕ ಶಿಕ್ಷಣಾಧಿಕಾರಿ ಶಿವಾಜಿ ಬೆಂಜರವಾಡೆ, ವಸಂತ ವಕೀಲ, ಧೋಂಡಿಬಾ ನರೋಟೆ, ಯಶವಂತರಾವ ಡೊಂಬಾಳೆ ಸೇರಿದಂತೆ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next