Advertisement
ಏ.23 ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, 48 ಗಂಟೆಗಳ ಮುಂಚಿತವಾಗಿ ಅಂದರೆ ಏ.21 ರ ಸಂಜೆ 6 ಗಂಟೆಗೆ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಆದ್ದರಿಂದ ಏ.22 ಮತದಾನದ ಮುನ್ನಾ ದಿನ ಹಾಗೂ ಏ.23ರ ಮತದಾನದ ದಿನ ಯಾವುದೇ ಮಾಧ್ಯಮಗಳನ್ನು ಬಳಸಿಕೊಂಡು ಪ್ರಚಾರ ಮಾಡಲು ಅವಕಾಶ ಇರುವುದಿಲ್ಲ. ಆದರೆ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸುವ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ (ಎಂಸಿಎಂಸಿ)ಯಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು.
ರಾಜಕೀಯ ಪಕ್ಷಗಳು, ಆಭ್ಯರ್ಥಿಗಳು ಹಾಗೂ ವಿವಿಧ ಮಾಧ್ಯಮಗಳು ಚುನಾವಣಾ ಆಯೋಗದ ಈ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಡಾ| ಹರೀಶಕುಮಾರ್ ಕೆ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
ಕಾರವಾರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಏ.23 ರಂದು ಮತದಾನಕ್ಕಾಗಿ ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ ಎಂದು ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮತದಾನ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ, 135(ಬಿ) ರಡಿಯಲ್ಲಿ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆ, ನಿಯೋಜಕರು ಅವಕಾಶ ಮಾಡಿಕೊಡಲು ಸೂಚಿಸಲಾಗಿದೆ. ಕಾರ್ಮಿಕರಿಗೆ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೇ ಇದ್ದಲ್ಲಿ ಅಂತಹ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆ
Advertisement