Advertisement
ಸರಕಾರ ಮಾಡಿಕೊಂಡಿರುವ ಪಟ್ಟಿ ಯಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ. ಚಿಕ್ಕಮಗಳೂರು, ವಿಜಯ ಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2022ರ ಜುಲೈ 15ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡ ಲಿವೆ. ಬೀದರ್, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜ ನಗರ, ಕೋಲಾರ ಹಾಗೂ ಬೆಂಗ ಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಸ್ಟ್ 1ರೊಳಗೆ ಗೋಶಾಲೆಗಳು ಕಾರ್ಯಾ ರಂಭ ಮಾಡಲಿವೆ. ರಾಯ ಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆಪ್ಟಂಬರ್ 1ರೊಳಗೆ, ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 1ರೊಳಗೆ ಹೀಗೆ ವರ್ಷದ ಅಂತ್ಯದೊಳಗೆ ಎಲ್ಲ 30 ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ ಎಂದು ಸರಕಾರ ಹೇಳಿದೆ.
ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನ ಬಳಕೆ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ (ಡಿಎಸ್‌ಪಿಸಿಎ) ಗಳಿಗೆ ವಹಿಸಲಾಗಿದೆ ಎಂದು ಸರಕಾರ ಹೇಳಿದೆ.
Related Articles
ಜಿಲ್ಲೆಗೊಂದರಂತೆ 30 ಗೋಶಾಲೆಯ ಜತೆಗೆ ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರಕಾರ ತೀರ್ಮಾನಿಸಿದೆ. ಕಾಮಗಾರಿ ಚಾಲ್ತಿಯಲ್ಲಿರುವ ಗೋಶಾಲೆಗಳಿಗೆ 15 ಕೋಟಿ, ಹೊಸ 70 ಗೋಶಾಲೆಗಳ ನಿರ್ಮಾಣಕ್ಕೆ 20 ಕೋಟಿ ರೂ. ಸೇರಿದಂತೆ ಗೋಶಾಲೆಗಳ ಸ್ಥಾಪನೆಗೆ 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇದಲ್ಲದೆ ಖಾಸಗಿ ಸಂಘ-ಸಂಸ್ಥೆಗಳು 197 ಗೋಶಾಲೆಗಳು ನಡೆಸುತ್ತಿದ್ದು, ಇವುಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಖಾಸಗಿ ಗೋಶಾಲೆಗಳಿಗೆ 2021-22ನೇ ಸಾಲಿಗೆ 3.77 ಕೋಟಿ ರೂ. ಹಾಗೂ 2022-23ನೇ ಸಾಲಿನಲ್ಲಿ 3.77 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳಿದೆ.
Advertisement
29 ಜಿಲ್ಲೆಗಳಲ್ಲಿ ಜಾಗಗಳ ಗುರುತುರಾಜ್ಯದ 30ರ ಪೈಕಿ ಬೆಂಗಳೂರು ನಗರ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭೂವಾಜ್ಯದಿಂದಾಗಿ ಗುರುತಿಸಲು ವಿಳಂಬವಾಗಿತ್ತು. ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೇರೆ ಜಾಗ ಗುರುತಿಸಲಾಗಿದೆ. ಬೆಂಗಳೂರಿನ ಜಾಗ ಗುರುತಿಸುವ ಪ್ರಕ್ರಿಯೆಗೆ ಸ್ವಲ್ಪ ಕಾಲಾವಕಾಶ ಬೇಕಾಗಬಹುದು. ಉಳಿದಂತೆ 29 ಜಿಲ್ಲೆಗಳಲ್ಲಿ ಗುರುತಿಸಲಾದ ಜಾಗವನ್ನು ಡಿಎಸ್‌ಪಿಸಿಎಗೆ ಹಸ್ತಾಂತರಿಸಲಾಗಿದೆ. ಈ ಜಿಲ್ಲೆಗಳಲ್ಲಿ ಡಿಎಸ್‌ಪಿಸಿಎ ಗೋಶಾಲೆ ನಿರ್ಮಾಣ ಕಾರ್ಯ ಆರಂಭಿಸಲಿದೆ ಎಂದು ಸರಕಾರದ ಪ್ರಮಾಣಪತ್ರದಲ್ಲಿ ಹೇಳಲಾಗಿದೆ.