Advertisement
ಪಟ್ಟಣ ಸೇರಿದಂತೆ ಇಡಿ ತಾಲೂಕು ಭೀಕರ ಬರಗಾಲಕ್ಕೆ ತುತ್ತಾಗಿದೆ. ಈಗ ಸರಾಸರಿ 41 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ಪ್ರಖರತೆ ಇದೆ. ಬಿಸಿಲಿನಿಂದ ಜನ ಹೊರಗಡೆ ಬರದ ಸ್ಥಿತಿಯಲ್ಲಿ ಪುರಸಭೆ ಚುನಾವಣೆ ನಿಗದಿಯಾಗಿದ್ದು ಅಂತಹ ಪ್ರಖರ ಬಿಸಿಲನ್ನೂ ಲೆಕ್ಕಿಸದೆ ಅಭ್ಯರ್ಥಿಗಳು ಮನೆ-ಮನೆಗೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ.
Related Articles
Advertisement
ಈ ಬಾರಿಯೂ ಸ್ಥಳೀಯವಾಗಿ ಕಾಂಗ್ರೆಸ್ ಪಕ್ಷದ ಶಾಸಕರೇ ಇರುವ ಕಾರಣ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಸ್ಥಳೀಯ ಶಾಸಕರ ಅಭಿವೃದ್ಧಿ ಕಾರ್ಯಗಳು ಹಾಗೂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಕೊಡುಗೆಗಳ ಕುರಿತು ಹೇಳುತ್ತ ಮತಯಾಚನೆಯಲ್ಲಿ ಕೈ ಕಾರ್ಯಕರ್ತರು ತೊಡಗಿದ್ದಾರೆ.
ಜೆಡಿಎಸ್: ಜೆಡಿಎಸ್ ಪಕ್ಷದಿಂದ ಒಟ್ಟು 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂಡಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಅಸ್ಥಿತ್ವವೇ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಪ್ರಬಲ ಕುರುಬ ಸಮುದಾಯದ ನಾಯಕ ಬಿ.ಡಿ. ಪಾಟೀಲರ ಹೆಗಲಿಗೆ ಪಕ್ಷದ ಅಧ್ಯಕ್ಷಗಿರಿ ಸಿಕ್ಕ ನಂತರ ಪಕ್ಷದ ಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 41 ಸಾವಿರ ಮತದೊಂದಿಗೆ ಎರಡನೇ ಸ್ಥಾನ ಪಡೆದಿದ್ದರು. ಈ ಬಾರಿಯ ಪುರಸಭೆ ಚುನಾವಣೆಯಲ್ಲಿ 15 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗೆ ಜೆಡಿಎಸ್ ನಾಯಕರು ಶ್ರಮಿಸುತ್ತಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಯುವಕರಿಗೆ ನೀಡಿದ ಉದ್ಯೋಗ ಹಾಗೂ ರೈತರಿಗೆ ನೀಡಿದ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಂಡು ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ.
ಭಾರತೀಯ ಜನತಾ ಪಾರ್ಟಿಯಿಂದ ಎಲ್ಲ 23 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕೇಂದ್ರದ ನಮೋ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಇದ್ದ ವೇಳೆ ಜಾರಿಗೆ ತಂದ ಅನೇಕ ಜನಪರ ಯೋಜನೆಗಳು ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿವೆ.•ಕಾಸುಗೌಡ ಬಿರಾದಾರ,
ಬಜೆಪಿ ಮಂಡಲ ಅಧ್ಯಕ್ಷ ಸ್ಥಳೀಯ ಶಾಸಕರು ನಮ್ಮ ಪಕ್ಷದವರಿದ್ದಾರೆ. ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಪುರಸಭೆ 23 ವಾರ್ಡ್‌ಗಳಲ್ಲೂ ಉತ್ತಮ ವ್ಯಕ್ತಿಗಳನ್ನು ಗುರುತಿಸಿ ಅಭ್ಯರ್ಥಿಗಳನ್ನಾಗಿ ಮಾಡಿದ್ದೇವೆ. ಹೀಗಾಗಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದ್ದೇವೆ.
•ಇಲಿಯಾಸ್ ಬೋರಾಮಣಿ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆಡಿಎಸ್ ಪಕ್ಷದಿಂದ 15 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕುಮಾರಸ್ವಾಮಿಯವರು ಜನತೆಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳುತ್ತ ಮತಯಾಚನೆ ಮಾಡುತ್ತಿದ್ದೇವೆ. ಜನ ನಮಗೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು ಕನಿಷ್ಠ 10 ಸೀಟುಗಳನ್ನು ಗೆಲ್ಲಲಿದ್ದೇವೆ.
•ಬಿ.ಡಿ. ಪಾಟೀಲ
ಜೆಡಿಎಸ್ ತಾಲೂಕಾಧ್ಯಕ್ಷ ಉಮೇಶ ಬಳಬಟ್ಟಿ