Advertisement

Delhi: ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಅಗ್ನಿಶಾಮಕ ವಾಹನ ದೌಡು, ರೋಗಿಗಳ ಸ್ಥಳಾಂತರ

12:58 PM Aug 07, 2023 | Team Udayavani |

ನವದೆಹಲಿ: ನವದೆಹಲಿಯ ಏಮ್ಸ್ ಆಸ್ಪತ್ರೆಯ ಎಂಡೋಸ್ಕೋಪಿ ಕೊಠಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಸೋಮವಾರ ವರದಿಯಾಗಿದೆ.

Advertisement

ಘಟನಾ ಸ್ಥಳದಲ್ಲಿ ದೆಹಲಿ ಅಗ್ನಿಶಾಮಕ ದಳದ 6ಕ್ಕೂ ಹೆಚ್ಚು ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸಿದೆ ಎನ್ನಲಾಗಿದೆ.

ಸೋಮವಾರ 11.54ರ ಸುಮಾರಿಗೆ ತುರ್ತು ಚಿಕಿತ್ಸಾ ವಿಭಾಗದ ಮೇಲಿರುವ ಹಳೆಯ ಓಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿದ್ದ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.

ಇದನ್ನು ಓದಿ: Maharastra: ಉದ್ಧವ್ ಠಾಕ್ರೆ ನಿವಾಸದಲ್ಲಿತ್ತು ನಾಲ್ಕು ಅಡಿ ಉದ್ದದ ನಾಗರ ಹಾವು: ವಿಡಿಯೋ…

 

Advertisement

Advertisement

Udayavani is now on Telegram. Click here to join our channel and stay updated with the latest news.

Next