Advertisement

Chitradurga; ಎನ್ ಫೀಲ್ಡ್ ಬೈಕ್ – ಆಟೋ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

04:16 PM Dec 31, 2023 | |

ಚಿತ್ರದುರ್ಗ: ಹೊಸ ಕಲ್ಲಹಳ್ಳಿ ಬಳಿ ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಆಟೋ ನಡುವೆ ಡಿಕ್ಕಿ ನಡೆದು ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

Advertisement

ಚಿತ್ರದುರ್ಗದ ಹೊಸ ಕಳ್ಳಹಳ್ಳಿ ಬಳಿ ಘಟನೆ ನಡೆದಿದ್ದು, ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ.

ಬೈಕ್ ಸವಾರನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತದಿಂದ ಘಟನೆ ನಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಸಿಪಿಐ ಮುದ್ದುರಾಜ್ ಭೇಟಿ ನೀಡಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next