Advertisement

ಋಣಮುಕ್ತ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ

02:12 PM Sep 06, 2019 | Suhan S |

ಚಿಕ್ಕಬಳ್ಳಾಪುರ: ಋಣಮುಕ್ತ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಹಾಗೂ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಕನಿಷ್ಠ 18 ಸಾವಿರ ರೂ. ವೇತನ ನಿಗದಿಪಡಿಸಬೇಕು, ಉದ್ಯೋಗಕ್ಕೆ ತಕ್ಕಂತೆ ಕೂಲಿ ನೀಡಬೇಕೆಂದು ಆಗ್ರಹಿಸಿ ಗುರುವಾರ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು.

Advertisement

ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಬಳಿಕ ನಗರದ ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಘೋಷಣೆ ಕೂಗಿದ ಪ್ರತಿಭಟನಕಾರರು, ಕೃಷಿ ಕೂಲಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಒಂದು ಕಡೆ ನೆರೆ ಹಾಗೂ ಮತ್ತೂಂದಡೆ ಬರ ಆವರಿಸಿ ರೈತಾಲಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದರೂ ಸರ್ಕಾರಗಳು ಮಾತ್ರ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಸಂಪೂರ್ಣ ವಿಫ‌ವಾಗಿವೆಯೆಂದು ಪ್ರತಿಭಟನಕಾರರು ಸರ್ಕಾರಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿ ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಘೋಷಣೆಗಳನ್ನು ಕೂಗಿದರು.

ದೇಶದಲ್ಲಿ ಆರ್ಥಿಕತೆ ಕುಸಿತ: ಪ್ರಾಂತ ಕೃಷಿ ಕೂಲಿಗಾರರ ಸಂಘದ ರಾಜ್ಯ ಸಮಿತಿ ಸದಸ್ಯ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಎನ್‌ಡಿಎ ಸರ್ಕಾರ ಅನುಸರಿಸುತ್ತಿರುವ ನವ ಉದಾರೀಕರಣದ ಜನ ವಿರೋಧಿ ಆರ್ಥಿಕ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಇಂದು ಪಾತಾಳಕ್ಕೆ ಕುಸಿದು ಉದ್ಯೋಗ ಸೃಷ್ಟಿ ಕುಸಿದಿದೆ. ಬ್ಯಾಂಕುಗಳು ಆರ್ಥಿಕ ನಷ್ಟಕ್ಕೆ ಗುರಿಯಾಗಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟರ್‌ ಕಂಪನಿಗಳ ಬಂಡವಾಳ ಹಿತ ಕಾಪಾಡಲು ಆಸಕ್ತಿ ತೋರುವ ಪ್ರಧಾನಿ ಮೋದಿ ರೈತರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಕೃಷಿರಂಗ ಕಡೆಗಣನೆ: ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರನ್ನು ಬೀದಿಪಾಲು ಮಾಡುವ ಮಾಲೀಕರ ಹಿತ ಕಾಯುವ ಕಾರ್ಮಿಕ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ದೇಶದ ದುಡಿಯುವ ಜನರನ್ನು ಉದ್ಯೋಗದಲ್ಲಿ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿಸಿದೆ. ಕೃಷಿ ರಂಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ.

Advertisement

ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನು ಸ್ಕೀಂ ನೌಕರರೆಂಬುದನ್ನು ಕೈ ಬಿಟ್ಟು, ಬದಲಿಗೆ ಕಾರ್ಮಿಕರೆಂದು ಪರಿಗಣಿಸಿ ಮಾಸಿಕ ಕನಿಷ್ಠ ವೇತನ 18 ಸಾವಿರ ನಿಗದಿಪಡಿಸಬೇಕೆಂದರು.

ಸರಿಯಾಗಿ ವೇತನ ನೀಡುತ್ತಿಲ್ಲ: ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ ಮಾತನಾಡಿ, ರಾಜ್ಯ ಸರ್ಕಾರವೇ ಗ್ರಾಪಂ ನೌಕರರಿಗೆ ಸರ್ಕಾರದಿಂದ ವೇತನ ಪಾವತಿಸುವ ಆದೇಶ ಮಾಡಿದರೂ ಇದುವರೆಗೂ ಸಮರ್ಪಕವಾಗಿ ಗ್ರಾಪಂ ನೌಕರರಿಗೆ ವೇತನ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪ್ರತಿ ತಿಂಗಳು ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕೆಂದ ಅವರು, ರೈತರಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡುವ ಡಾ.ಸ್ವಾಮಿನಾಥನ್‌ ವರದಿ ಜಾರಿಗೆ ತಂದು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಗೆ ಕಾನೂನು ಜಾರಿ ಮಾಡಬೇಕು. ಋಣಮುಕ್ತ ಕಾಯ್ದೆಯನ್ನು ಸಪರ್ಮಕವಾಗಿ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ ಮುನಿತಿಮ್ಮಯ್ಯ, ಜನವಾದಿ ಮಹಿಳಾ ಸಂಘದ ಜಿಲ್ಲಾ ಉಪಾಧ್ಯಕ್ಷೆ ಸಾವಿತ್ರಮ್ಮ, ಕರ್ನಾಟಕ ಪ್ರಾಂತ ರೈತ ಸಂಘದ ಕೆ.ನಾಗರಾಜ್‌, ಮುಖಂಡರಾದ ಅನಸೂಯಮ್ಮ, ವೆಂಕಟೇಶಮ್ಮ, ವೆಂಕಟರಾಯಪ್ಪ, ನರಸಿಂಹ ಸ್ವಾಮಿ, ರಾಮಕೃಷ್ಣಪ್ಪ, ನ್ಯಾತಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next