Advertisement

ಬಾಲ ನ್ಯಾಯ ಕಾಯ್ದೆ ಜಾರಿ: ವಿಚಾರಣೆ ಮುಂದಕ್ಕೆ

11:02 PM Nov 12, 2019 | Lakshmi GovindaRaju |

ಬೆಂಗಳೂರು: “ಬಾಲ ನ್ಯಾಯ (ಮಕ್ಕಳ ಆರೈಕೆ ಹಾಗೂ ಸಂರಕ್ಷಣೆ) ಕಾಯ್ದೆ-2015’ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ದಿಸೆಯಲ್ಲಿ ನ್ಯಾಯಾಲಯ ಏನೆಲ್ಲಾ ನಿರ್ದೇಶನಗಳನ್ನು ನೀಡಬೇಕು ಎಂಬ ಬಗ್ಗೆ ವಿವರ ನೀಡುವಂತೆ “ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ’ಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

Advertisement

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿ ಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಬಾಲ ನ್ಯಾಯ ಕಾಯ್ದೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸಲು ನ್ಯಾಯಾಲಯ ಏನೆಲ್ಲಾ ನಿರ್ದೇಶನ ನೀಡಬೇಕು ಎಂದು ಪಟ್ಟಿ ನೀಡುವಂತೆ ಈ ಪ್ರಕರಣದಲ್ಲಿ ಕೋರ್ಟ್‌ಗೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ನಿಯೋಜಿಸಲಾಗಿರುವ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲ ಕ್ಲಿಫ‌ನ್‌ ರೊಜಾರಿಯೋ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿತು.

ಅಲ್ಲದೇ, ಬಾಲ ನ್ಯಾಯ ನಿಧಿ ಸ್ಥಾಪನೆ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶ ಹಾಜರುಪಡಿಸಬೇಕು. ಅದೇ ರೀತಿ ಲೈಂಗಿಕ ಶೋಷಣೆ ಮತ್ತು ಮಕ್ಕಳ ಅರೈಕೆ ಕೇಂದ್ರಗಳಲ್ಲಿ ವಾಸ ಮಾಡುತ್ತಿರುವ 113 ಮಕ್ಕಳ ಕುರಿತ ಪ್ರಕರಣಗಳ ತನಿಖಾ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next