Advertisement

ಪಾಲಿಕೆ ಆಯುಕ್ತರು-ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ನಿರಶನ

01:40 PM Dec 23, 2021 | Team Udayavani |

ಹುಮನಾಬಾದ: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೊಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಹುಮನಾಬಾದ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

Advertisement

ಪಟ್ಟಣದ ಪುರಸಭೆಯಿಂದ ಮುಖ್ಯರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಬ್ಬಂದಿ, ತಹಶೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದ ಸಿಬ್ಬಂದಿ, ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ರಾಜ್ಯದ ವಿವಿಧಡೆ ಹಲ್ಲೆ ನಡೆಯುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದೇ ರೀತಿ ಮುಂದುವರಿದರೆ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಲ್ಲೆ ನಡೆಸುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪುರಸಭೆ ಮುಖ್ಯಾಧಿಕಾರಿ ಶೇಖಚಂದ್‌ ಪಟೇಲ್‌, ಸಂಘದ ಅಧ್ಯಕ್ಷ ಸೈಯದ್‌ ಖಾನ, ಉಪಾಧ್ಯಕ್ಷ ಬಸವರಾಜ, ಕಾರ್ಯದರ್ಶಿ ದತ್ತು ಔರಾದೆ, ಜಾವೀದ್‌ ಹುಸೇನ್‌, ಶಾಮದಾಸ, ಸಲ್ಲಿಮ್‌ ಮಿಯ್ನಾ, ಈಶ್ವರ ತರಲಂಗ, ಬಸವರಾಜ ಸೇರಿದಂತೆ ಅನೇಕ ಸಿಬ್ಬಂದಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next