Advertisement

ಚುನಾವಣೆ ನೀತಿ ಸಂಹಿತೆ ಜಾರಿ: ಡಿಸಿ

11:19 AM Sep 22, 2019 | Suhan S |

ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸೆ.23ರಿಂದಲೇ ಅ ಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಶನಿವಾರದಿಂದಲೇ ಜಿಲ್ಲೆಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿ ಕಾರಿ ಕೃಷ್ಣ ಭಾಜಪೇಯಿ ತಿಳಿಸಿದರು.

Advertisement

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. ಹಿರೇಕೆರೂರು ಮತ ಕ್ಷೇತ್ರದ ಚುನಾವಣಾಧಿ  ಕಾರಿಗಳಾಗಿ ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆಯ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ಆರ್‌.ಎಚ್‌.

ಬಾಗವಾನ, ರಾಣಿಬೆನ್ನೂರ ಮತ ಕ್ಷೇತ್ರದ ಚುನಾವಣಾಧಿಕಾರಿಯಾಗಿ ತುಂಗಾ ಮೇಲ್ದಂಡೆ ಯೋಜನೆ ಪ್ರಭಾರ ಭೂಸ್ವಾಧಿನಾ ಅಧಿಕಾರಿ ಅಬೀದ್‌ ಗದ್ಯಾಳ, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿ: ಉಪಚುನಾವಣೆ ನಡೆಯುವ ಎರಡು ಮತ ಕ್ಷೇತ್ರಗಳಲ್ಲಿ ಮತದಾನ ಚಲಾವಣೆ ಮಾಡಲು 01-01-2019 ಅರ್ಹತಾ ದಿನಾಂಕವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳಸಿದ ಮತದಾರರ ಪಟ್ಟಿಯನ್ನು ಬಳಸಲಾಗುವುದು. ಮತದಾನ ಜಾಗೃತಿಗಾಗಿ ಜಿಪಂ ಮುಖ್ಯ ಕಾರ್ಯ ನಿರ್ವಾಹಣಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವೀಪ್‌ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ನೀತಿ ಸಂಹಿತೆ: ಸೆ. 21ರಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಜಿಲ್ಲೆಯಾದ್ಯಂತ ನೀತಿಸಂಹಿತೆ ಅನ್ವಯಿಸುತ್ತದೆ. ನೀತಿಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಲಾಗುವುದು. ಈ ಉದ್ದೇಶಕ್ಕಾಗಿ ಫ್ಲೈಯಿಂಗ್‌ಯಿಂಗ್‌ ಸ್ಕ್ವಾಡ್‌, ಸ್ಟ್ಯಾ ಟಿಕ್‌ ಕಣ್ಗಾವಲು ತಂಡ, ವಿಡಿಯೋ ಕಣ್ಗಾವಲು ತಂಡ, ಚುನಾವಣಾ ವೆಚ್ಚ ಪರಿಶೀಲನಾ ತಂಡ, ಸೆಕ್ಟರ್‌ ಆಫೀಸರ್ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕೆ.ಜೆ. ದೇವರಾಜು ಮಾಹಿತಿ ನೀಡಿ, ಶಾಂತಿಯುತ, ನಿರ್ಭಯ ಚುನಾವಣೆಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಜನರ ವಿಶ್ವಾಸ ಪಡೆದುಕೊಂಡು ಪಾರದರ್ಶಕವಾಗಿ ಚುನಾವಣೆ ನಡೆಯಲು ಪೊಲೀಸ್‌ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ. ಹಿರೇಕೆರೂರಲ್ಲಿ ಆರು, ರಾಣಿಬೆನ್ನೂರಿನಲ್ಲಿ ಎರಡು ದುರ್ಬಲ ಮತಗಟ್ಟೆ ಎಂದು ಗುರುತಿಸಲಾಗಿದೆ. ಸ್ಥಿರಕಣ್ಗಾವಲು ತಂಡ, ಫ್ಲೈಯಿಂಗ್‌ ಸ್ಕ್ವಾಡ್‌ಗಳನ್ನು ರಚಿಸಿ ಸೂಕ್ತ ಕಣ್ಗಾವಲು ಇರಿಸಲಾಗುವುದು ಎಂದು ಅವರು ತಿಳಿಸಿದರು. ಪ್ರತಿ ಮತಗಟ್ಟೆಗೆ ತಲಾ ನಾಲ್ಕು ಸಿಬ್ಬಂದಿಗಳಂತೆ ಹಾಗೂ ಶೇ.10 ರಷ್ಟು ಹೆಚ್ಚುವರಿ ಸಿಬ್ಬಂದಿಗಳನ್ನು ಕಾಯ್ದಿರಿಸಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿ ಕಾರಿ ಎನ್‌.ತಿಪ್ಪೇಸ್ವಾಮಿ, ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಚುನಾವಣಾಧಿ ಕಾರಿ ವಿನೋದಕುಮಾರ ಹೆಗ್ಗಳಗಿ ಹಾಗೂ ರಾಣಿಬೆನ್ನೂರು ಮತ ಕ್ಷೇತ್ರದ ಚುನಾವಣಾಧಿ ಕಾರಿ ಅಬೀದ್‌ ಗದ್ಯಾಳ, ಚುನಾವಣಾ ತಹಶೀಲ್ದಾರ್‌ ಪ್ರಶಾಂತ ನಾಲವಾರ, ಉಪ ಚುನಾವಣಾಧಿಕಾರಿಗಳಾದ ಹಿರೇಕೆರೂರು ತಹಶೀಲ್ದಾರ್‌ ಆರ್‌.ಎಚ್‌. ಬಾಗವಾನ, ರಾಣಿಬೆನ್ನೂರ ತಹಶೀಲ್ದಾರ್‌ ಸಿ.ಎಸ್‌. ಕುಲಕರ್ಣಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿ ಕಾರಿ ಅನ್ನಪೂರ್ಣ ಮುದಕಮ್ಮನವರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next