Advertisement

ಸಮಾನ ವೇತನ ಜಾರಿ ಮೂಲಕ ರಾಜ್ಯ ಮಾದರಿಯಾಗಲಿ

11:51 AM Apr 10, 2017 | Team Udayavani |

ಬೆಂಗಳೂರು: ಸಂವಿಧಾನದ ಆಶಯ ಹಾಗೂ ಸುಪ್ರೀಂ ಕೋರ್ಟ್‌ ಆದೇಶದನ್ವಯ ಗುತ್ತಿಗೆ ಮತ್ತು ಹೊರೆಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ತರುವ ಮೂಲಕ  ಕರ್ನಾಟಕವು ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್‌.ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

Advertisement

ಸಿಐಟಿಯು ರಾಜ್ಯ ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾನ ಕೆಲಸಕ್ಕೆ ಸಮಾನ ವೇತನ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಅರ್ಥ ಬರಬೇಕಾದರೆ ಸಮಾನತೆ ಬರಬೇಕು. ಅದರಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು. ಇದು ಸಂವಿಧಾನದ ಆಶಯವೂ ಆಗಿದ್ದು, ಅದನ್ನು ಜಾರಿಗೊಳಿಸುವ ಮೂಲಕ ನಮ್ಮ ರಾಜ್ಯ ಇತರ ರಾಜ್ಯಗಳಿಗೆ ಮಾದರಿ ಆಗಲಿ ಎಂದರು.

ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮಿ ಮಾತನಾಡಿ, ಗುತ್ತಿಗೆ ಪದ್ಧತಿ ಎಂಬುದು ನೌಕರರ ಶೋಷಣೆಯ ಅಸ್ತ್ರ. ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೌಕರರು ಅಥವಾ ಕಾರ್ಮಿಕರನ್ನು ನೇಮಿಸಿಕೊಂಡು ಸರಿಯಾಗಿ ವೇತನ, ಭ್ಯತೆ ಹಾಗೂ ಸೌಲಭ್ಯಗಳನ್ನು ಕಲ್ಪಿಸದೆ ಶೋಷಣೆ ಮಾಡಲಾಗುತ್ತಿದೆ. ನೇರ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರರನ್ನು ಕಡೆಗಣಿಸಲಾಗಿದೆ.

ಕಾರ್ಮಿಕ ಕಾಯ್ದೆ ಪ್ರಕಾರ ವೇತನ ಹಾಗೂ ಸೌಲಭ್ಯಗಳು ಸಿಗುತ್ತಿಲ್ಲ. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಸಂಘಟಿಸಿ ರಾಜ್ಯಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿ, ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಆಂಧ್ರಪ್ರದೇಶದ ಗುತ್ತಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಎ.ವಿ.ನಾಗೇಶ್ವರ್‌ರಾವ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next