Advertisement

ಬಡ್ತಿ ಮೀಸಲಾತಿ ಜಾರಿ: ಗೊಂದಲಗಳ ನಿವಾರಣೆಗೆ ಸಮಗ್ರ ಮಾರ್ಗಸೂಚಿ ಸೂಕ್ತ  

04:35 PM Jan 25, 2023 | Team Udayavani |

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ “ನಾಗರಿಕ ಸೇವಾ ಅಧಿಕಾರಿಗಳಿಗೆ’ ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಲ್ಲಿ ಆಗುತ್ತಿರುವ ಗೊಂದಲಗಳನ್ನು ನಿವಾರಿಸಲು “ಕರ್ನಾಟಕ ನಾಗರಿಕ ಸೇವಾ ಕಾಯ್ದೆ-2017ರಡಿ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸುವುದು ಸೂಕ್ತ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

Advertisement

ರಾಜ್ಯ ಸರ್ಕಾರದ ವಿದ್ಯುತ್‌ ಸರಬರಾಜು ಕಂಪೆನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾನ್ಯ ವರ್ಗಕ್ಕೆ ಸೇರಿದ ಬಿ. ಗುರುಮೂರ್ತಿ ಮತ್ತಿತರ ಹಿರಿಯ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, 2017ರ ಕಾಯ್ದೆ ಜಾರಿಗೆ ತರಲು 2019ರ ಜೂ.24 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ಕೆಲವು ಅಸ್ಪಷ್ಟತೆಗಳಿವೆ. ಯಾವುದೇ ಹೆಚ್ಚಿನ ಗೊಂದಲವನ್ನು ತಪ್ಪಿಸಲು ಸರ್ಕಾರವು ಆ ಆದೇಶವನ್ನು ಹಿಂಪಡೆಯುವುದು ಸೂಕ್ತ ಮತ್ತು ಹೊಸ ಮಾರ್ಗಸೂಚಿ ಜಾರಿಗೊಳಿಸಿರುವುದೇ ಸರಿ ಎಂದು ಹೇಳಿದೆ.

ಅಲ್ಲದೆ, ಹೊಸ ಮಾರ್ಗಸೂಚಿಗಳನ್ನು ರೂಪಿಸುವಾಗ ಸುಪ್ರೀಂಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ಗಮನದಲ್ಲಿಟ್ಟುಕೊಂಡಿರಬೇಕು, ಬಡ್ತಿಯಲ್ಲಿನ ಬ್ಯಾಕ್‌ಲಾಗ್‌ ಖಾಲಿ ಹುದ್ದೆಗಳ ಭರ್ತಿ, ನಂತರದ ಮೀಸಲು, ಮೀಸಲಾತಿ ವರ್ಗದವರು ಸಾಮಾನ್ಯವಾಗಿ ಅರ್ಹರಾಗಿರುತ್ತಾರೆಂಬ ಸಮಸ್ಯೆ ನಿವಾರಣೆ, ಅರ್ಹತೆ ಮತ್ತು ಇತರ ಸಂಬಂಧಿತ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನಿರ್ದೇಶನ ನೀಡಿರುವ ಹೈಕೋರ್ಟ್‌, ಇದರಿಂದ ಕಾಯ್ದೆಯ ಅನುಷ್ಠಾನದಲ್ಲಿ ಆಗಬಹುದಾದ ಗೊಂದಲ ನಿವಾರಣೆಯಾಗುವುದಲ್ಲದೆ, ಅನಗತ್ಯ ವಾಜ್ಯಗಳು ಏರ್ಪಡುವುದು ತಪ್ಪುತ್ತದೆ ಎಂದು ವಿಶ್ಲೇಷಿಸಿದೆ.

ಅರ್ಜಿದಾರ ಅಧಿಕಾರಿಗಳು ಸರ್ಕಾರಿ ಆದೇಶದ ಕಾನೂನುಬದ್ಧತೆ ಮತ್ತು 2017ರ ಕಾಯ್ದೆ ಮತ್ತು ಸರ್ಕಾರಿ ಆದೇಶ ಆಧರಿಸಿ ಕರ್ನಾಟಕ ವಿದ್ಯುತ್‌ ಪ್ರಸರಣಾ ನಿಗಮ ನಿಯಮಿತ (ಕೆಪಿಟಿಸಿಎಲ್‌) ಅಧಿಸೂಚಿಸಿರುವ ಅಧಿಕಾರಿಗಳ ತಾತ್ಕಾಲಿಕ ಮತ್ತು ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಶ್ನಿಸಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆಲ ಅಧಿಕಾರಿಗಳಿಗೆ ಕೆಪಿಟಿಸಿಎಲ್‌ ನೀಡಿರುವ ಬಡ್ತಿ ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು.

ಆದರೆ ನ್ಯಾಯಾಲಯವು ಅವರ ವಾದವನ್ನು ತಿರಸ್ಕರಿಸಿ, ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಸರ್ಕಾರಕ್ಕೆ ಸಲಹೆ ನೀಡುವುದು ಅಗತ್ಯವಾಗಿದೆ ಎಂದು ಹೇಳಿರುವುದಲ್ಲದೆ, ಸರ್ಕಾರಿ ಆದೇಶದಲ್ಲಿನ ಅಸ್ಪಷ್ಟತೆಗಳನ್ನು ಅಥೆìçಸಿಕೊಳ್ಳದೆ ವಿಶ್ಲೇಷಣೆ ಮಾಡಬಾರದು ಸ್ಪಷ್ಟಪಡಿಸಿದೆ.

Advertisement

ಸುಪ್ರೀಂಕೋರ್ಟ್‌ ಈಗಾಗಲೇ ಎತ್ತಿಹಿಡಿದಿರುವ 2017ರ ಕಾಯ್ದೆ ಅನಾವಶ್ಯಕ ವ್ಯಾಜ್ಯಗಳನ್ನು ಹುಟ್ಟುಹಾಕುತ್ತಿದೆ. ಹಾಗಾಗಿ ಅದನ್ನು ವಸ್ತುಶಃ ಜಾರಿಗೊಳಿಸುವುದನ್ನು ಖಾತ್ರಿಪಡಿಸಿಕೊಳ್ಳಲು ಹೊಸ ಮಾರ್ಗಸೂಚಿ ಅಗತ್ಯವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next