ಸೌಥಂಪ್ಟನ್: ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆದ ಟಿ20 ಸರಣಿಯಲ್ಲಿ ಕಾರ್ಯನಿರ್ವಹಿಸಿದ್ದ ಮ್ಯಾಚ್ ರೆಫ್ರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಮೂರು ಪಂದ್ಯಗಳಿಗೆ ರೆಫ್ರಿಯಾಗಿದ್ದ ಫಿಲ್ ವಿಟ್ಟಿಕೇಸ್ ಅವರರಿಗೆ ಪಿಸಿಆರ್ ಟೆಸ್ಟ್ ನಲ್ಲಿ ಕೋವಿಡ್ ಪಾಸಿಟಿವ್ ಆಗಿದೆ.
ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಸ್ಪಷ್ಟನೆ ನೀಡಿದ್ದು, ರೆಫ್ರಿ ಫಿಲ್ ಅವರು ಆರೋಗ್ಯವಾಗಿದ್ದು, ಕೋವಿಡ್ ನ ಯಾವುದೇ ಲಕ್ಷಣಗಳಿಲ್ಲ ಎಂದಿದ್ದಾರೆ.
ಎರಡೂ ತಂಡಗಳ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸದಸ್ಯರು ಸುರಕ್ಷಿತರಾಗಿದ್ದಾರೆ. ಆದರೆ ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಇತರ ಏಳು ಸದಸ್ಯರು ವಿಟ್ಟಿಕೇಸ್ ರೊಂದಿಗೆ ನಿಕಟ ಸಂಪರ್ಕದಲ್ಲಿ ಬಂದಿದ್ದರಿಂದ 10 ದಿನಗಳ ಕಾಲ ಪ್ರತ್ಯೇಕವಾಗಿ ಇರಬೇಕಾಗುತ್ತದೆ.
ಇದನ್ನೂ ಓದಿ:ಟಿ20 ವಿಶ್ವಕಪ್ ಯುಎಇಗೆ ಸ್ಥಳಾಂತರ ಖಚಿತ : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಏಳರಲ್ಲಿ ಐದು ಮಂದಿ ಸದಸ್ಯರು ಇಂದಿನಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿತ್ತು. ಆದರೆ ಇದೀಗ ಇಸಿಬಿ ಬೇರೆ ವ್ಯವಸ್ಥೆ ಮಾಡಬೇಕಾಗಿದೆ.
ಫಿಲ್ ವಿಟ್ಟಿಕೇಸ್ ಅವರು ಮೂರು ಪಂದ್ಯಗಳಿಗೆ ರೆಫ್ರಿಯಾಗಿದ್ದರು. ಇಂಗ್ಲೆಂಡ್ ತಂಡವೂ ಪಂದ್ಯಗಳನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.