Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜಿ. ವೆಂಕಟೇಶಯ್ಯ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ ಈ ಉಲ್ಲೇಖವಿದೆ ಎಂದರು. ಮೊಸಳೆ ಹೊಸಹಳ್ಳಿ ಕಾಲೇಜಿನಲ್ಲಿ 173 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜಿನಿಂದ ಗ್ರಾಮೀಣ ಭಾಗದ ಸಾಕಷ್ಟು ಬಡ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.
Related Articles
Advertisement
ರೈತರ ಒಕ್ಕಲೆಬ್ಬಿಸುವ ಹುನ್ನಾರ: ರಾಜ್ಯ ಸರ್ಕಾರ ಭೂ ಮಾಫಿಯಾ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳು, ಕೈಗಾರಿ ಕೋದ್ಯಮಿಗಳ, ಬಿಲ್ಡರ್ ಜತೆ ಶಾಮೀಲಾಗಿದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಾಮಾಣಿಕ ಅಧಿಕಾರಿಗಳಿಗೆ ತೊಂದರೆ: ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ. ಚನ್ನರಾಯಪಟ್ಟಣದ ಎಕ್ಸಿಕ್ಯೂಟಿವ್ ಎಂಜಿನಿಯರ್ ಒಬ್ಬರು ಅಲ್ಲಿಗೆ ವರ್ಗಾವಣೆ ಮಾಡಿಸಿಕೊಳ್ಳಲು ತಾವು 1.50 ಲಕ್ಷ ರೂ. ಕೊಟ್ಟಿರುವುದಾಗಿ ಹೇಳುತ್ತಾರೆ. ಸಕಲೇಶಪುರದಲ್ಲಿಯೂ ಪ್ರಮಾಣಿಕ ಅಧಿಕಾರಿಗಳನ್ನು ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ಕಾಮಗಾರಿಗೂ ಅನುಮೋದನೆ ಪಡೆಯಬೇಕಾದರೆ 5 ರಿಂದ 10 ಪರ್ಸೆಂಟ್ ಕಮಿಷನ್ ನೀಡಬೇಕಿದೆ. ಸಮ್ಮಿಶ್ರ ಸರ್ಕಾರದ ಆಡಳಿತವಾಧಿಯಲ್ಲಿ ನಮ್ಮನ್ನು ಪರ್ಸಂಟೇಜ್ ಸರ್ಕಾರ ಎಂದು ಟೀಕಿಸುತ್ತಿದ್ದರು, ಈಗ ಯಾವುವು ಪರ್ಸೆಂಟೆಸ್ ಸರ್ಕಾರ ಎಂಬುದರ ಬಗ್ಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.
ಹಾಸನ ಗಂಡು ಮೆಟ್ಟಿದ ನಾಡು, ನಮ್ಮ ಜಿಲ್ಲೆಯವರನ್ನು ಎದುರು ಹಾಕಿಕೊಂಡರೆ ಯಾವ ಸರ್ಕಾರವು ಉಳಿಯುವುದಿಲ್ಲ. ಹಿಂದೆ ದೊಡ್ಡಹಳ್ಳಿ ಗೋಲಿಬಾರ್ ನಡೆದು ಅಂದಿನ ಸರ್ಕಾರ ಉರುಳಿದ್ದು ಎಲ್ಲರಿಗೂ ಗೊತ್ತಿದೆ.-ಎಚ್.ಡಿ. ರೇವಣ್ಣ, ಶಾಸಕ