ಶಿವಮೊಗ್ಗ: ತಾಲ್ಲೂಕಿನ ಬೀರನಕೆರೆ ಬಳಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಕ್ಯಾಂಪ್ ಗೆ ತೆರಳಿದ್ದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿಯೋರ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ.
ಇಲ್ಲಿನ ಪ್ರತಿಷ್ಠಿತ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜ್ ಪರಿಣಿತಾ (20) ಅನುಮಾನಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ.
ಇಂಜಿನಿಯರಿಂಗ್ ಕಾಲೇಜ್ ವತಿಯಿಂದ ಬೀರನಕೆರೆ ಬಳಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ನಡೆಸಲಾಗುತ್ತಿತ್ತು. ಸುಮಾರು 22 ವಿದ್ಯಾರ್ಥಿಗಳ ತಂಡ ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ವಾಸ್ತವ್ಯ ಹೂಡಿದ್ದರು.
ಆದರೆ ಇಂದು ಬೆಳಿಗ್ಗೆ ವಿದ್ಯಾರ್ಥಿನಿ ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿಯ ಸ್ಪಷ್ಟನೆ ನೀಡಿದ್ದು ಆದರೆ ಇದನ್ನು ಒಪ್ಪದ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ಶವಗಾರದ ಬಳಿ ಕಾಲೇಜ್ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ವಾಗ್ವಾದ ನಡೆದಿದ್ದು ಪೋಲಿಸರ ಮಧ್ಯ ಪ್ರವೇಶ ನಡೆಸಿದರು.
ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ