Advertisement
ಪಟ್ಟಣದ ಜಿಪಂ ಕಾರ್ಯಪಾಲಕ ಇಂಜಿನಿಯರ್‌ರವರ ಕಾರ್ಯಾಲಯದಲ್ಲಿ ನಡೆದ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವದ ಗಮನಸೆಳೆದಿರುವ ಕೃಷ್ಣರಾಜಸಾಗರ ಆಣೆಕಟ್ಟೆಯನ್ನು ನಿರ್ಮಿಸಿದರು. ಆ ಭಾಗದ ರೈತರು ಹಾಗೂಪ್ರತಿಯೊಬ್ಬ ನಾಗರಿಕರು ಅಭಿವೃದ್ಧಿಯತ್ತ ಸಾಗಲು ಸರ್ ಎಂ. ವಿಶ್ವೇಶ್ವರಯ್ಯನವರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ಮಿಸಿ ಆಭಾಗದ ಜನತೆಗೆ ಆಶಾ ಜ್ಯೋತಿಯಾಗಿದ್ದಾರೆ. ಇವರ ಆದರ್ಶ ಗುಣಗಳನ್ನು ಪಾಲಿಸಿ ಕೀರ್ತಿ ಗಳಿಸಬೇಕು. ರಾಜ್ಯ ಹಾಗೂ ದೇಶದಾದ್ಯಂತ ಇಂಜಿನಿಯರ್‌ಗಳು ಹಲವಾರು ಆಣೆಕಟ್ಟೆಗಳುಹಾಗೂ ಬೃಹತ್ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ದೇಶವನ್ನು ಅಭಿವೃದ್ಧಿಯತ್ತಕೊಂಡೊಯ್ಯುವಲ್ಲಿ ಇಂಜಿಯರ್‌ಗಳ ಪಾತ್ರ ಮಹತ್ವದ್ದಾಗಿದೆ ಎಂದರು.
Related Articles
Advertisement
ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಸರ್ಕಾರಿ ನೌಕರರ ಸಂಘದಜಿಲ್ಲಾಧ್ಯಕ್ಷ ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸತೀಶ್, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಎಲ್. ಸುರೇಶ್‌ರಾಜು, ಜಿಲ್ಲಾ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ಅರುಣ್‌ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.