Advertisement
ಇಲ್ಲಿನ ಬಾಸಿನ್ ರಿಸರ್ವ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಆರು ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದರೆ, ಬಂಗ್ಲಾ ವನಿತೆಯರು ಕೇವಲ 134 ರನ್ ಗಳಿಗೆ ಆಲೌಟಾದರು.
Related Articles
Advertisement
ಈ ಗೆಲುವಿನೊಂದಿಗೆ ಇಂಗ್ಲೆಂಡ್ ಸೆಮಿ ಫೈನಲ್ ಪ್ರವೇಶಿಸಿತು. ಮೊದಲು ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್ ನಂತರ ಸತತ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ನೆಗೆಯಿತು.
ಅಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿ ಸ್ಥಾನ ಖಾತ್ರಿ ಪಡಿಸಿಕೊಂಡಿದೆ. ನಾಲ್ಕನೇ ಸ್ಥಾನಕ್ಕೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಫಲಿತಾಂಶ ಬರಬೇಕಿದೆ. ಭಾರತ ಗೆದ್ದರೆ ಸೆಮಿ ಪ್ರವೇಶ ಪಡೆಯಲಿದ್ದು, ದಕ್ಷಿಣ ಆಫ್ರಿಕಾ ಗೆದ್ದರೆ ವೆಸ್ಟ್ ಇಂಡೀಸ್ ತಂಡವು ಸೆಮಿ ಫೈನಲ್ ಗೇರಲಿದೆ.