ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 241 ರನ್ ಗಳ ಭಾರಿ ಹಿನ್ನಡೆ ಅನುಭವಿಸಿದೆ. ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಕೂಡಾ ಆರಂಭಿಕ ಆಘಾತ ಅನುಭವಿಸಿದೆ.
ಮೂರನೇ ದಿನದ ಅಂತ್ಯಕ್ಕೆ ಆರು ವಿಕೆಟ್ ಗೆ 257 ರನ್ ಗಳಿಸಿದ್ದ ಭಾರತ ಇಂದು 337 ರನ್ ಗಳಿಗೆ ಆಲ್ ಔಟ್ ಆಯಿತು. ವಾಷಿಂಗ್ಟನ್ ಸುಂದರ್ ಅಜೇಯ 85 ರನ್ ಗಳಿಸಿದರು. ರವಿ ಅಶ್ವಿನ್ 31 ರನ್ ಗಳಿಸಿದರು. ನಿನ್ನೆಯ ದಿನದಾಟದಲ್ಲಿ ಪಂತ್ 91 ಮತ್ತು ಪೂಜಾರ 73 ರನ್ ಗಳಿಸಿದ್ದರು.
ಇದನ್ನೂ ಓದಿ: ಇಂದಿನಿಂದ ಆಸ್ಟ್ರೇಲಿಯನ್ ಓಪನ್ : ಪ್ರಧಾನ ಸುತ್ತು ಪ್ರವೇಶಿಸಿದ ಅಂಕಿತಾ
ಇಂಗ್ಲೆಂಡ್ ಪರ ಬೆಸ್ ನಾಲ್ಕು ವಿಕೆಟ್ ಪಡೆದರೆ, ಜ್ಯಾಕ್ ಲೀಚ್, ಆ್ಯಂಡರ್ಸನ್ ಮತ್ತು ಆರ್ಚರ್ ತಲಾ ಎರಡು ವಿಕೆಟ್ ಕಿತ್ತರು.
241 ರನ್ ಗಳ ಬೃಹತ್ ಮುನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಗೆ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಅಶ್ವಿನ್ ಎಸೆತದಲ್ಲಿ ರೋರಿ ಬರ್ನ್ಸ್ ಔಟಾದರು.
ಸದ್ಯ ಭೋಜನ ವಿರಾಮದ ವೇಳೆ ಇಂಗ್ಲೆಂಡ್ ಒಂದು ವಿಕೆಟ್ ನಷ್ಟಕ್ಕೆ ಒಂದು ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳಿಸಿತ್ತು.