Advertisement

ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಸ್ಪತ್ರೆಯಿಂದ ಬಿಡುಗಡೆ

02:38 AM Apr 13, 2020 | Hari Prasad |

ಕೋವಿಡ್ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆರೋಗ್ಯ ಸುಧಾರಿಸಿದ್ದರಿಂದ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿ ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗುವುದು.

Advertisement

ವೈದ್ಯರ ತಂಡದ ಸಲಹೆ ಮೇರೆಗೆ ಶೀಘ್ರವೇ ಅವರು ಕೆಲಸಕ್ಕೆ ಮರಳುವುದಿಲ್ಲ ಎಂದು ಡೌನಿಂಗ್‌ ಸ್ಟ್ರೀಟ್‌ ವಕ್ತಾರ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಜಾರ್ಜ್‌ ಆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬೋರಿಸ್‌ ಜಾನ್ಸನ್‌, ನನ್ನ ಜೀವ ಆರೋಗ್ಯ ಸಿಬ್ಬಂದಿಗೆ ಮೀಸಲು ಎಂದು ಧನ್ಯವಾದ ಅರ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next