Advertisement

ಇಂಗ್ಲೆಂಡ್ ವಿರುದ್ಧ ಕೊನೆಯ ಪಂದ್ಯದಲ್ಲಿ ಎಡವಿ ಸರಣಿ ಸೋತ ವನಿತೆಯರು

07:32 AM Jul 15, 2021 | Team Udayavani |

ಚೆಲ್ಮ್ಸ್ ಪೋರ್ಡ್: ಇಂಗ್ಲೆಂಡ್ ವನಿತೆಯರ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಸೋತ ಭಾರತ ತಂಡ ಸರಣಿ ಸೋಲನುಭವಿಸಿದೆ. ಇದರೊಂದಿಗೆ ಏಕದಿನ ಸರಣಿಯ ಬಳಿಕ ಟಿ20 ಸರಣಿಯಲ್ಲೂ ನಿರಾಶೆ ಅನುಭವಿಸಿದೆ.

Advertisement

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ 20 ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಸ್ಮೃತಿ ಮಂಧನಾ 70 ರನ್ ಮತ್ತ ಹರ್ಮನ್ ಪ್ರೀತ್ ಕೌರ್ 36 ರನ್ ಗಳಿಸಿದರೆ, ಕೊನೆಯಲ್ಲಿ ರಿಚಾ ಘೋಷ್ 13 ಎಸೆತದಲ್ಲಿ 20 ರನ್ ಗಳಿಸಿದರು. ಇಂಗ್ಲೆಂಡ್ ಪರ ಎಕ್ಲೆಸ್ಟೋನ್ ಮೂರು ವಿಕೆಟ್, ಬ್ರಂಟ್ ಒಂದು ವಿಕೆಟ್ ಪಡೆದರು.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್‌ : ಬಂಗಾರ ಬೇಟೆಗೆ ಬಂಪರ್‌ ಬಹುಮಾನ

ಗುರಿ ಬೆನ್ನತ್ತಿದ ಇಂಗ್ಲೆಂಡ್ ಕೇವಲ ಎರಡು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಡೇನಿಯಲ್ ವ್ಯಾಟ್ 89 ರನ್ ಮತ್ತು ಸೀವರ್ 42 ರನ್ ಗಳಿಸಿದರು. 18.4 ಓವರ್ ನಲ್ಲಿ ಇಂಗ್ಲೆಂಡ್ ಜಯ ಸಾಧಿಸಿತು. ಇದರೊಂದಿಗೆ ಟಿ20 ಸರಣಿಯನ್ನು 2-1 ಅಂತರದಿಂದ ಜಯಿಸಿತು.

Advertisement

Udayavani is now on Telegram. Click here to join our channel and stay updated with the latest news.

Next