Advertisement
ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ರಾಜ್ಯೋತ್ಸವ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಂಗ್ಲ ಮಾಧ್ಯಮದ ಭ್ರಮೆಯಿಂದಾಗಿ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗು ತ್ತಿದೆ. ಕನ್ನಡ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿದೆ. ಕಚೇರಿಗಳಲ್ಲಿ ಶೇ. 100ರಷ್ಟು ಕನ್ನಡ ಅನುಷ್ಠಾನಕ್ಕೆ ಸರಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಸಚಿವರು ಹೇಳಿದರು.
4,225 ಮನೆ ನಿರ್ಮಾಣ 4,225 ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಉಡುಪಿ ಕ್ಷೇತ್ರದಲ್ಲಿ 10 ಕೋ.ರೂ. ಅನುದಾನದಲ್ಲಿ 112, ಕಾಪುವಿನಲ್ಲಿ 1.50 ಕೋ.ರೂ. ಅನುದಾನದಲ್ಲಿ 39 ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ
ಎಸ್‌ಎಫ್ಸಿ ಅನುದಾನದಡಿ ಉಡುಪಿ ನಗರಸಭೆಯ 10 ಕೋಟಿ ಹಾಗೂ ಕುಂದಾಪುರ ಪುರಸಭೆಯ 4 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ನಗರೋತ್ಥಾನ 3ನೇ ಹಂತದ ಯೋಜನೆಯಡಿಯಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 62 ಕೋ.ರೂ. ಮೊತ್ತದ ಯೋಜನೆಗೆ ವರದಿ ಸಿದ್ಧಪಡಿಸಲಾಗಿದೆ.
Related Articles
2017-18ನೇ ಸಾಲಿನಲ್ಲಿ 99.10 ಕೋ.ರೂ. ವೆಚ್ಚ ದಲ್ಲಿ 137.57 ಕಿ.ಮೀ ಉದ್ದದ ಜಿಲ್ಲಾ ಮುಖ್ಯ ರಸ್ತೆ ಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು ಟೆಂಡರ್ ಹಂತದಲ್ಲಿದೆ. ಅಲ್ಲದೆ 17.35 ಕೋ.ರೂ. ವೆಚ್ಚದಲ್ಲಿ 6 ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.
Advertisement
ಶಿಕ್ಷಕರ ನೇಮಕಾತಿ7 ಪ್ರೌಢಶಾಲೆ ಮತ್ತು 23 ಪ್ರಾಥಮಿಕ ಶಾಲೆಗಳ ಕಟ್ಟಡಗಳ ದುರಸ್ತಿ/ಪುನರ್ ನಿರ್ಮಾಣಕ್ಕಾಗಿ 91.75 ಲ.ರೂ. ಮತ್ತು 5 ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ 43.50 ಲ.ರೂ. ಮಂಜೂ ರಾಗಿದೆ. 6ರಿಂದ 8ನೇ ತರಗತಿವರೆಗೆ 60 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧಾ, ಎಸ್‌ಪಿ ಡಾ| ಸಂಜೀವ ಪಾಟೀಲ್, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಪೌರಾಯುಕ್ತ ಮಂಜುನಾಥಯ್ಯ ಉಪಸ್ಥಿತರಿದ್ದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಕಲಾತಂಡ, ಸ್ತಬ್ಧಚಿತ್ರಗಳನ್ನೊಳಗೊಂಡ ಮೆರ ವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಸಾಧಕರಿಗೆ ಸಮ್ಮಾನದೊಂದಿಗೆ ರಾಜ್ಯೋತ್ಸವ ಆಚರಿಸಲಾಯಿತು. 2018ರಲ್ಲಿ ತ್ಯಾಜ್ಯಮುಕ್ತ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ (ಎಸ್‌ಎಲ್‌ಆರ್‌ಎಂ) ಕಾರ್ಯ ಕ್ರಮದಡಿ ಸುಮಾರು 650 ಸ್ವಯಂ ಸೇವಕ ರಿಗೆ ತ್ಯಾಜ್ಯಗಳನ್ನು ಸಂಪನ್ಮೂಲ ವಾಗಿ ಪರಿವರ್ತಿಸುವ ಬಗ್ಗೆ ತರಬೇತಿ ನೀಡ ಲಾಗಿದೆ. 2018ರ ಅ. 2ರ ವೇಳೆಗೆ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ತ್ಯಾಜ್ಯಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.