Advertisement
ಬಿಜೆಪಿಯ ಉಮಾನಾಥ ಕೋಟ್ಯಾನ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 1000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜತೆಗೆ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. 276 ಕರ್ನಾಟಕ ಪಬ್ಲಿಕ್ ಶಾಲೆಗಳು, ಈಗಾಗಲೇ 6- 7ನೇ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧಿಸಲಾಗುತ್ತಿರುವ ಶಾಲೆಗಳು, ಹೆಚ್ಚಿನ ದಾಖಲಾತಿ ಹೊಂದಿರುವ ಗ್ರಾಮೀಣ ಪ್ರದೇಶದ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮಆರಂಭಿಸಲು ಸಿದಟಛಿತೆ ನಡೆಸಲಾಗಿದೆ ಎಂದು ತಿಳಿಸಿದರು.
ದೃಶ್ಯಗಳನ್ನು ಒಳಗೊಂಡ ಇ-ಕಂಟೆಂಟ್‌ಗಳನ್ನು ಡಿಎಸ್ ಇಆರ್‌ಟಿ ಮೂಲಕ ಸಿದ್ಧಪಡಿಸಲಾಗುವುದು ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ 1715 ಇಂಗ್ಲಿಷ್ ಭಾಷಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. 1000 ಇಂಗ್ಲಿಷ್ ಭಾಷಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು. 1521 ಉಪನ್ಯಾಸಕರ ನೇರ ನೇಮಕಾತಿ
ವಿಧಾನಸಭೆ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1204 ಉಪನ್ಯಾಸಕರ ನೇಮಕ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಉಳಿದಂತೆ ಖಾಲಿಯಿರುವ 1512 ಉಪನ್ಯಾಸಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Related Articles
‘ಸಿ’ ವಲಯದ ಕಾಲೇಜುಗಳಿಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದರು. ಜತೆಗೆ 2997 ಅತಿಥಿ ಉಪನ್ಯಾಸಕರನ್ನು
ತಾತ್ಕಾಲಿಕವಾಗಿ ನೇಮಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಸರ್ಕಾರಿ ಹಾಗೂ ಅನುದಾನಿತ ಪಪೂ ಕಾಲೇಜುಗಳಲ್ಲಿ ಕಾರ್ಯಭಾರ ಕಡಿಮೆ ಇರುವ ಉಪನ್ಯಾಸಕರನ್ನು ಇತರೆಡೆ ನಿಯೋಜನೆಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
Advertisement
ಪದವಿ ಕಾಲೇಜು ಆರಂಭಕ್ಕೆ ಚಿಂತನೆರಾಯಚೂರು ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಗಿಲ್ಲೇಸೂಗೂರು ಗ್ರಾಮದಲ್ಲಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಪ್ರಾದೇಶಿಕ ಜಂಟಿ ನಿರ್ದೇಶಕರಿಂದ ಸ್ಥಳ ಪರಿಶೀಲನಾ ವರದಿ ಪಡೆದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ
ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದರು. ಬಿಜೆಪಿಯ ಬಸನಗೌಡ ದದ್ದಲ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪ್ರಾದೇಶಿಕ ಜಂಟಿ ನಿರ್ದೇಶಕರಿಂದ ನಿಯಮಾನುಸಾರ ಸ್ಥಳ ಪರಿಶೀಲನಾ ವರದಿ ಕೋರಲಾ ಗಿದೆ. ವರದಿ ಸಲ್ಲಿಕೆಯಾದ ಬಳಿಕ
ಮಾನದಂಡ ಆಧರಿಸಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ಸ್ಥಳ ಗುರುತಿಸಲು ಸೂಚನೆ: ಎಚ್.ಡಿ.ಕೋಟೆಯ ಸರ ಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಈಗಾ ಗಲೇ 3.80 ಕೋಟಿ ರೂ. ಕಾಯ್ದಿರಿಸಲಾಗಿದ್ದು, ನಿವೇಶನ ನಿಗದಿಯಾಗುತ್ತಿದ್ದಂತೆ ಕಟ್ಟಡ ನಿರ್ಮಾಣ
ಆರಂಭವಾಗಲಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಅಬಕಾರಿ ಇಲಾಖೆಯ ವಿವಿಧ ವೃಂದ ಗಳಲ್ಲಿ 5485 ಮಂಜೂರಾದ ಹುದ್ದೆ ಪೈಕಿ 2584 ಹುದ್ದೆ ಖಾಲಿಯಿದ್ದು, ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಿದೆ ಎಂದು ಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.