Advertisement

ಎಲ್ಲಾ ಮಕ್ಕಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ

11:12 AM May 20, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲಾ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇದರಿಂದಾಗಿ ತಮ್ಮ ಮಕ್ಕಳನ್ನು ‘ಇಂಗ್ಲಿಷ್‌ ಮಾಧ್ಯಮ’ದಲ್ಲಿ ಓದಿಸಬೇಕೆಂಬ ಕಾರಣಕ್ಕಾಗಿ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ಪೋಷಕರು ಇದೀಗ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೇ ಮಕ್ಕಳನ್ನು ಸೇರಿಸಬಹುದಾಗಿದೆ.

Advertisement

ಶಿಕ್ಷಣ ಇಲಾಖೆಯ ಈ ಕ್ರಮದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿಯೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಹೊಂದಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾಭಿವೃದ್ಧಿ ಮತ್ತು ನಿರ್ವಹಣಾ ಸಮಿತಿಯು (ಎಸ್‌ಡಿಎಂಸಿ) ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಹಾಗೂ ಜಿಲ್ಲಾ ಉಪ ನಿರ್ದೇಶಕರು (ಡಿಡಿಪಿಐ)ಗಳಿಗೆ ಮನವಿ ಸಲ್ಲಿಸಿದರೆ, ಸರ್ಕಾರ ಅನುಮತಿ ನೀಡಲಿದೆ.

ಸಾಕಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದೆ. ಮೂಲಸೌಕರ್ಯವಿದ್ದರೆ, ಅನುಮತಿ ನೀಡ ಲಾಗುತ್ತದೆ. ಅಗತ್ಯ ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡು ಬೋಧನೆಗೆ ವ್ಯವಸ್ಥೆಗೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರವು 2019-20ನೇ ಸಾಲಿನಲ್ಲಿ 1001 ಮತ್ತು 2020-21ರಲ್ಲಿ 1,400 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿತು. 276 ಕರ್ನಾಟಕ ಪಬ್ಲಿಕ್‌ ಶಾಲೆ, 444 ಉರ್ದು ಮಾಧ್ಯಮ ಸೇರಿ 2,401 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧಿಸ ಲಾಗು ತ್ತಿದೆ. ಈ ಶಾಲೆಗಳಲ್ಲಿ ಪ್ರತಿ ತರಗತಿಗೆ 30 ಮಕ್ಕ ಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಶಾಲೆಗಳಲ್ಲಿ ಕೊಠಡಿಗಳು ಲಭ್ಯವಿದ್ದಲ್ಲಿ ಪ್ರವೇಶ ನೀಡುವಂತೆ ಸರ್ಕಾರ ತಿಳಿಸಿದೆ.

ಪೋಷಕರಿಗೆ ಅನುಕೂಲ: ಕೊರೊನಾದಿಂದ ಆರ್ಥಿಕ ಹೊಡೆತಕ್ಕೆ ಸಿಲುಕಿರುವ ಮತ್ತು ತಮ್ಮ ಮಕ್ಕ ಳನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿಸಬೇಕೆಂಬ ಉದ್ದೇಶ ದಿಂದ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದೇವೆ ಎಂದು ಹೇಳುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬಹುದಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ.ಪ್ರಸನ್ನಕುಮಾರ್‌ ತಿಳಿಸಿದ್ದಾರೆ.

Advertisement

2021-22 ಮತ್ತು 2022-23ನೇ ಸಾಲಿನಲ್ಲಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿಲ್ಲ. ಆದರೆ, ಈಗಾಗಲೇ ಆರಂಭಿಸಿರುವ ಶಾಲೆ ಗಳಲ್ಲಿ ತರಗತಿಗಳ ವಿಸ್ತರಿಸಲು ಅವಕಾಶ ಕಲ್ಪಿಸ ಲಾಗಿದೆ. ಸಂಬಂಧಪಟ್ಟ ಶಾಲೆಗಳಲ್ಲಿ ಮೂಲ ಸೌಕರ್ಯವಿದ್ದಲ್ಲಿ ಅನುಮತಿ ನೀಡಲಾಗುತ್ತದೆ. ಇನ್ನು ಕಳೆದ ವರ್ಷ 3ನೇ ತರಗತಿವರೆಗೆ ಇದ್ದ ಆಂಗ್ಲ ಮಾಧ್ಯಮವನ್ನು ಈ ವರ್ಷ 4ನೇ ತರಗತಿವರೆಗೆ ವಿಸ್ತರಿಸಲಾಗಿದೆ.

ಮತ್ತಷ್ಟು ಶಾಲೆಗಳಲ್ಲಿ ಆರಂಭಿಸಲು ಪೋಷಕರ ಒತ್ತಾಯ:

ರಾಜ್ಯದಲ್ಲಿ 44,615 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಈ ಪೈಕಿ ಕೇವಲ 2,401 ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮವಿದೆ. ಮತ್ತಷ್ಟು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದರೆ, ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ವರ್ಗದ ಮಕ್ಕಳು ಸೇರಿ ಎಲ್ಲಾ ವರ್ಗದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಅನುಕೂಲವಾಗಲಿದೆ. ಕೆಲವೇ ಮಂದಿಗೆ ಸಿಗುತ್ತಿರುವ ಸವಲತ್ತು ರಾಜ್ಯಾದ್ಯಂತ ಸಿಗುವಂತೆ ಮಾಡಬೇಕು ಎಂಬುದು ಪೋಷಕರ ಒತ್ತಾಯವಾಗಿದೆ.

ಈಗಾಗಲೇ ಆಂಗ್ಲ ಮಾಧ್ಯಮ ಬೋಧನೆ ಮಾಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯವಿದ್ದರೆ, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳಿಗೆ ಪ್ರವೇಶ ಕಲ್ಪಿಸಲು ನಿರ್ದೇಶಿಸಲಾಗಿದೆ. ● ಎಂ.ಪ್ರಸನ್ನಕುಮಾರ್‌, ನಿರ್ದೇಶಕರು, ಪ್ರಾಥಮಿಕ ಶಿಕ್ಷಣ             –ಎನ್‌.ಎಲ್‌.ಶಿವಮಾದು

Advertisement

Udayavani is now on Telegram. Click here to join our channel and stay updated with the latest news.

Next