Advertisement

ಆಂಗ್ಲ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ತನ್ವೀರ್‌ ಸೇಠ್ 

03:45 AM Feb 09, 2017 | Team Udayavani |

ವಿಧಾನಸಭೆ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1818 ಆಂಗ್ಲ ಶಿಕ್ಷಕರ ಹುದ್ದೆ ಖಾಲಿ ಇದ್ದು , ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ನ ಪಿ.ರಾಜೀವ್‌ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಾಥಮಿಕ ಶಾಲೆಗಳಲ್ಲಿ 831, ಪ್ರೌಢ ಶಾಲೆಗಳಲ್ಲಿ 751 ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ 736 ಆಂಗ್ಲ ಶಿಕ್ಷಕರ ಹುದ್ದೆ ಖಾಲಿ ಇವೆ.2104-15 ನೇ ಸಾಲಿನಲ್ಲಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ 293 ಆಂಗ್ಲ ಭಾಷಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 

ಆದರೆ, ನ್ಯಾಯಾಲವು 2003ರ ವೃಂದ ಮತ್ತು ನೇಮಕಾತಿ ನಿಯಮ ರದ್ದುಗೊಳಿಸಿದ ಕಾರಣ ಹೊಸ ನಿಯಮಗಳಂತೆ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next