Advertisement
ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
Related Articles
Advertisement
ಪ್ರಾಚಾರ್ಯರು ತರಾಟೆಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ತಮ್ಮ ಭಾಷಣದ ನಡುವೆ ಕೇಳಿದ ಮಹಿತಿಗೆ ಉತ್ತರಿಸದ ಪ್ರಾಚಾರ್ಯ ಯಂಕಣ್ಣರನ್ನು ವೇದಿಕೆ ಮೇಲೆಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಭಾಷಣದ ನಡುವೆ ಬೋಸರಾಜು ಪ್ರಾಚಾರ್ಯರನ್ನು ವಿದ್ಯಾರ್ಥಿಗಳ ಮಾಹಿತಿ ಕೇಳಿದರು. ಒಟ್ಟು ವಿದ್ಯಾರ್ಥಿಗಳು, ಕಳೆದ ಪರೀಕ್ಷೆಯಲ್ಲಿ ಹಾಜರು ಮತ್ತು ಗೈರು ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ, ಹಾಗೂ ಪರೀಕ್ಷೆಯ ಶೇಕಡಾವಾರು ಫಲಿತಾಂಶ ಎಷ್ಟು ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರಚಾರ್ಯರಲ್ಲಿ ಉತ್ತರವೇ ಇರಲಿಲ್ಲ. ಕೋಪಗೊಂಡ ಅವರು, ನಿಮ್ಮಲ್ಲಿ ಸಾಮಾನ್ಯ ಮಾಹಿತಿ ಇಲ್ಲ. ಅಲ್ಲದೆ ಕಾಲೇಜ್‌ಗೆ ಸಂಬಂಧಿಸಿದ ಯಾವುದೇ ಮಾಹಿತಿ ನೀಡುವುದಿಲ್ಲ. ಅಭಿವೃದ್ಧಿ ಹಾಗೂ ಸಮಸ್ಯೆಗಳ ವರದಿ ನೀಡುವುದಿಲ್ಲ. ಹೀಗಾದರೆ ಕಾಲೇಜಿನ ಅಭಿವೃದ್ಧಿ ಸಾಧ್ಯವಿಲ್ಲ. ನಿಮ್ಮಲ್ಲಿ ಬೇಜವಾಬ್ದಾರಿತನ ಕಾಣುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಶಾಸಕ ಹಂಪಯ್ಯ ನಾಯಕ ಕೂಡ ಧ್ವನಿಗೂಡಿಸಿ ಪ್ರಾಚಾರ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.