Advertisement
ಮಾ. 20ರಂದು ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರ ಹೊರಟು, ನೇತ್ರಾದಿ ಗರಡಿಯಲ್ಲಿ ದರ್ಶನದ ಬಳಿಕ ರಾತ್ರಿ ಬೈದೇರುಗಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು. ಬಳಿಕ ಕಿನ್ನಿದಾರು ಗರಡಿ ಇಳಿಯುವುದು, ಮಾ. 21 ಪ್ರಾತಃಕಾಲ 4 ಗಂಟೆಗೆ ಕಟ್ಟಬೀಡಿಗೆ ಬೈದೇರುಗಳು ಹಾಲು ಕುಡಿಯಲು ಬಂದು ಬೀಡಿಗೆ ಕಾಣಿಕೆ ಅರ್ಪಿಸುವುದು, ಬೆಳಗ್ಗೆ 6ಕ್ಕೆ ಕೋಟಿ ಚೆನ್ನೆಯ ದರ್ಶನ, ಬೈದೇರುಗಳ ಸೇಟು, ಅರಿಕೆ ಗಂಧ ಪ್ರಸಾದ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದ.ಕ. ಉಡುಪಿ, ಕಾಸರಗೋಡು ಭಾಗಗಳಿಂದ 20 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಕ್ಷೇತ್ರದ ಆನುವಂಶಿಕ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. Advertisement
ಎಣ್ಮೂರು: ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ, ಆದಿಬೈದೇರುಗಳ ನೇಮ
05:55 AM Mar 22, 2019 | |
Advertisement
Udayavani is now on Telegram. Click here to join our channel and stay updated with the latest news.