Advertisement
ದ್ವಿತೀಯ ಪಿಯುಸಿಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ರುವುದರಿಂದ ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿಯೂ ದಾಖಲಾತಿ ಹೆಚ್ಚಲಿದೆ ಎಂಬ ನಿರೀಕ್ಷೆಯನ್ನು ಈ ಹಿಂದೆಯೇ ಸರಕಾರ ಮಾಡಿತ್ತು. ಈಗ ಸರಕಾರಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್ ಮೊದಲ ವಾರದ ವರೆಗೂ ಅವಕಾಶ ನೀಡಲಾಗಿದೆ. ರಾಜ್ಯದ 330 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ 1.45 ಲಕ್ಷ ವಿದ್ಯಾರ್ಥಿಗಳು ದಾಖ ಲಾತಿ ಪಡೆದಿದ್ದಾರೆ.
Related Articles
ಪದವಿಯಲ್ಲಿ ಕಲಾ ಮತ್ತುವಾಣಿಜ್ಯಕ್ಕೆ ಬೇಡಿಕೆ ಹೆಚ್ಚಿದೆ. ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿ ಗಳು ಕೂಡ ಪದವಿಯಲ್ಲಿ ಬಿ.ಕಾಂ, ಬಿಬಿಎಂ ಮೊದಲಾದ ವಾಣಿಜ್ಯ ಕೋರ್ಸ್‌ಗಳಿಗೆ ಸೇರುತ್ತಿದ್ದಾರೆ. ಎನ್‌ಇಪಿ ಅನುಷ್ಠಾನವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಆಯ್ಕೆಯೂ ಹೆಚ್ಚಿದೆ. ಗ್ರಾಮೀಣ ಮತ್ತು ನಗರ ಭಾಗದಲ್ಲಿ ವಾಣಿಜ್ಯ ವಿಭಾಗವೇ ವಿದ್ಯಾರ್ಥಿಗಳ ಮೊದಲ ಆಯ್ಕೆಯಾಗಿದೆ. ಶೇ. 45ಕ್ಕೂ ಅಧಿಕ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ ಇನ್‌ಟೇಕ್ ಹೆಚ್ಚಿಸುವ ಕ್ರಮ ಕೂಡ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
Advertisement
ಸರಕಾರಿ ಕಾಲೇಜುಗಳಲ್ಲಿ ದಾಖಲಾತಿ ನಡೆಯುತ್ತಲೇ ಇದೆ. ಸುಮಾರು 2 ಲಕ್ಷ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆಯುವ ಸಾಧ್ಯತೆಯಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯ ಹೆಚ್ಚಿಸಿಕೊಳ್ಳಲು ಸೂಚನೆ ನೀಡಿದ್ದೇವೆ.-ಪಿ. ಪ್ರದೀಪ್, ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ -ರಾಜು ಖಾರ್ವಿ ಕೊಡೇರಿ