Advertisement
ಭಾನುವಾರ ನಗರಕ್ಕೆ ಕುಡಿಯುವ ನೀರು ಪೂರೈಸುವ ಕೃಷ್ಣಾ ನದಿಯಿಂದ ಭೂತನಾಳ ಕೆರೆ ತುಂಬಿಸುವ ತಿಡಗುಂದಿ ಅಕ್ವಾಡೆಕ್ಟ್ ಸ್ಥಳ ಪರಿಶೀಲನೆ ನಡೆಸಿ, ನೀರು ಹರಿಯುವ ಪ್ರಮಾಣ, ಅಕ್ವಾಡೆಕ್ಟ್ ನಿಂದ ನೀರು ಎತ್ತುವ ಪಂಪ್ ಗಳು, ವಿದ್ಯುತ್ ಪರಿಕರಗಳ ಸಾಮರ್ಥ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ನಗರಕ್ಕೆ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ಅಗತ್ಯ ಇರುವ ಎಲ್ಲ ವ್ಯವಸ್ಥೆಗಳನ್ನು ನಿರ್ಲಕ್ಷ್ಯ ತೋರದಂತೆ ತ್ವರಿತವಾಗಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
Related Articles
Advertisement
ಇದಲ್ಲದೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಜಿಲ್ಲೆಯಲ್ಲಿ 9 ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ 1000 ಕಿ.ಮೀ. ಮುಖ್ಯ ಕಾಲುವೆಗಳ ನಿರ್ಮಾಣ ಮಾಡಿದ್ದು, ಇದರಿಂದ ಜಿಲ್ಲೆಯಲ್ಲಿ ನೂರಾರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಂಡು ಅಂತರ್ಜಲ ಮಟ್ಟ ಏರಿಕೆಯಾಗಿದೆ ಎಂದರು.
ಇದರ ಪರಿಣಾಮವಾಗಿ ಈ ಹಿಂದೆ ಬೇಸಿಗೆ ಸಂದರ್ಭದಲ್ಲಿ ಇಂಡಿ, ಚಡಚಣ ಭಾಗದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ 700 ಟ್ಯಾಂಕರ್ ಬೇಕಿದ್ದ ಸ್ಥಿತಿಯನ್ನು 35 ಟ್ಯಾಂಕರ್ ಗೆ ತಗ್ಗಿಸಲಾಗಿದೆ. ಇಂಡಿ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ 6 ತಿಂಗಳಲ್ಲಿ ಸದರಿ ಯೋಜನೆ ಪೂರ್ಣಗೊಂಡರೆ ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಬರವೇ ಇರುವುದಿಲ್ಲ ಎಂದರು.