Advertisement

ಬೆಳೆಹಾನಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ : ಜಿಲ್ಲಾಧಿಕಾರಿ

01:00 AM Mar 08, 2019 | Harsha Rao |

ಮಡಿಕೇರಿ: ಬೆಳೆಹಾನಿ ಪರಿಹಾರ ಸಂಬಂಧ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ಕೂಡಲೇ ಕಚೇರಿಗೆ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.               

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪದ ಕಾಮಗಾರಿಗಳು ಹಾಗೂ ಪರಿಹಾರ ವಿತರಣೆ ಪ್ರಗತಿ ಕುರಿತು ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

 ಬೆಳೆಹಾನಿ ಸಂಬಂಧಿಸಿದಂತೆ ಈಗಾಗಲೇ ಬೆಳೆ ಪರಿಹಾರ ತಂತ್ರಾಂಶದಲ್ಲಿ ದಾಖಲಿ ಸಲಾಗುತ್ತಿದೆ. ಬಾಕಿ ಇರುವುದನ್ನು ತಂತ್ರಾಂಶದಲ್ಲಿ ಅಳವಡಿಸಿ ಮಾಹಿತಿ ಒದಗಿಸುವಂತೆ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.    

ಹಾಗೆಯೇ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಮನೆ, ತೋಟ ಕಳೆದುಕೊಂಡ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಕುಟುಂಬದವರ ನಿಖರ ಮಾಹಿತಿಯನ್ನು ಶುಕ್ರವಾರದೊಳಗೆ ಒದಗಿಸುವಂತೆ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದರು. 

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದವರಲ್ಲಿ ಸುಮಾರು 76 ಕುಟುಂಬಗಳ ದಾಖಲಾತಿ ಇಲ್ಲದಿರುವ ಬಗ್ಗೆ ಮಾಹಿತಿ ಇದ್ದು, ಈ ಸಂಬಂಧ ಪುನರ್‌ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.  

Advertisement

ಬಾಣೆ ಭೂಮಿಗೆ ಸಂಬಂಧಿಸಿದಂತೆ ಬೆಳೆಹಾನಿ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಸಂಬಂಧ ಪರಿಹಾರ ಯಾರಿಗೆ ನೀಡಬಹುದು ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಕಂದಾಯ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.    

ಈಗಾಗಲೇ ಜಂಬೂರು, ಮದೆ, ಕರ್ಣಂಗೇರಿಯಲ್ಲಿ ನಿರ್ಮಾಣವಾಗು ತ್ತಿರುವ ಮನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಅವರು ಸೂಚಿಸಿದರು.

ಕೆ.ಲಕ್ಷಿ¾ಪ್ರಿಯಾ ಅವರು ಮನೆಗಳನ್ನು ಕೂಡಲೇ ನಿರ್ಮಾಣ ಮಾಡಬೇಕಿದೆ. ಜೊತೆಗೆ ಬೆಳೆಹಾನಿಯ ಪರಿಹಾರವನ್ನು ಅರ್ಹ ಕುಟುಂಬಗಳಿಗೆ ತಲುಪಿಸಬೇಕಿದೆ ಎಂದು ಅವರು ಹೇಳಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಮಾತನಾಡಿದರು. ತಹಶೀ ಲ್ದಾರರಾದ ಗೋವಿಂದ ರಾಜು, ಕಂದಾ ಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇತರರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next