Advertisement

ಪಕ್ಷವನ್ನು ಬಲಪಡಿಸಲೆಂದೇ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದೇನೆ: ಖರ್ಗೆ

04:42 PM Oct 02, 2022 | Team Udayavani |

ನವದೆಹಲಿ : ನಾನು ಯಾರನ್ನು ವಿರೋಧಿಸಲು ಚುನಾವಣೆಗೆ ಇಳಿದಿಲ್ಲ, ಪಕ್ಷವನ್ನು ಬಲಪಡಿಸಲೆಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯರು ಮತ್ತು ಯುವ ನಾಯಕರು ಅಖಾಡಕ್ಕೆ ಇಳಿಯುವಂತೆ ಒತ್ತಾಯಿಸಿದ ನಂತರ ನಾನು ಚುನಾವಣಾ ಕಣಕ್ಕೆ ಇಳಿದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ :ಇಂದು ಪೂಜ್ಯ ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು?: ಸಿಎಂ ಕಿಡಿ

”ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ತತ್ವಕ್ಕೆ ಅನುಗುಣವಾಗಿ, ನಾಮಪತ್ರ ಸಲ್ಲಿಸಿದ ದಿನವೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.ನಿರುದ್ಯೋಗವಿದೆ, ಹಣದುಬ್ಬರ ಹೆಚ್ಚುತ್ತಿದೆ, ಶ್ರೀಮಂತರು ಮತ್ತು ಬಡವರ ನಡುವಿನ ಅಂತರವು ಹೆಚ್ಚುತ್ತಿದೆ ಮತ್ತು ಬಿಜೆಪಿಯ ಎಲ್ಲಾ ಭರವಸೆಗಳು ಈಡೇರಿಲ್ಲ” ಎಂದು ಖರ್ಗೆ ಹೇಳಿದರು.

”ಬದಲಾವಣೆ ತರುವ ಅಭ್ಯರ್ಥಿ” ಎಂದು ಶಶಿ ತರೂರ್ ಅವರ ಹೇಳಿಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಚುನಾವಣೆಯ ನಂತರ ಸುಧಾರಣೆಗಾಗಿ ಯಾವುದೇ ನಿರ್ಧಾರವನ್ನು ಜಂಟಿಯಾಗಿ ತೆಗೆದುಕೊಳ್ಳಲಾಗುವುದು ಮತ್ತು ಒಬ್ಬ ವ್ಯಕ್ತಿಯಿಂದ ಅಲ್ಲ ಎಂದರು.

Advertisement

‘ಗಾಂಧಿ ಕುಟುಂಬವು ತನಗೆ ಬೆಂಬಲ ನೀಡುತ್ತಿದೆ’ ಎಂಬ ಅಭಿಪ್ರಾಯಗಳ ನ್ನು ಖರ್ಗೆ ತಿರಸ್ಕರಿಸಿ, ಇತರ ನಾಯಕರು ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ ಎಂದರು.

ವಕ್ತಾರ ಸ್ಥಾನಕ್ಕೆ ರಾಜೀನಾಮೆ

ಇದೆ ವೇಳೆ ದೀಪೇಂದರ್ ಹೂಡಾ, ಮತ್ತು ಸೈಯದ್ ನಾಸೀರ್ ಹುಸೇನ್ ಅವರೊಂದಿಗೆ ಕಾಂಗ್ರೆಸ್ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಖರ್ಗೆ ಪರ ಪ್ರಚಾರ ಮಾಡುವುದಾಗಿ ಗೌರವ್ ವಲ್ಲಭ್ ಹೇಳಿದರು.ಖರ್ಗೆ ಅವರು ನಿರಂತರತೆ ಮತ್ತು ಯಥಾಸ್ಥಿತಿಯ ಅಭ್ಯರ್ಥಿಯಾಗಿದ್ದಾರೆ ಎಂದರು.

ಅಕ್ಟೋಬರ್ 8 ರಂದು ಅಂತಿಮ ಪಟ್ಟಿ

ಕಾಂಗ್ರೆಸ್ ಗುರುವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 24 ರಿಂದ 30 ರವರೆಗೆ ಇತ್ತು.ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಅವರ ನಾಮಪತ್ರ ಶನಿವಾರ ತಿರಸ್ಕೃತಗೊಂಡ ನಂತರ ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಮತ್ತು ತರೂರ್ ಕಣದಲ್ಲಿ ಉಳಿದಿದ್ದಾರೆ. ನಾಮಪತ್ರಗಳ ಪರಿಶೀಲನೆಗೆ ಅಕ್ಟೋಬರ್ 1 ರಂದು ದಿನಾಂಕವಾಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ.ಅಕ್ಟೋಬರ್ 8 ರಂದು ಸಂಜೆ 5 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಗತ್ಯ ಬಿದ್ದರೆ ಅಕ್ಟೋಬರ್ 17 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. 9,000ಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ಮತದಾನದಲ್ಲಿ ಮತ ಚಲಾಯಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next