ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಭಾರೀ ಮಳೆಯಾಗಿದ್ದು ಜಲಪಾತ, ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಿದ್ದು ಮುಂಜಾಗೃತ ಕ್ರಮವಾಗಿ ಪ್ರವಾಸಿ ಕೇಂದ್ರಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ದತ್ತಪೀಠ, ಮುಳ್ಳಯ್ಯನಗಿರಿ, ಜಲಪಾತಗಳು ಸೇರಿದಂತೆ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಝರಿ, ಹೊನ್ನಮ್ಮನಹಳ್ಳ ಜಲಪಾತಕ್ಕೆ ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದ್ದು, ಕೈಮರ ಚೆಕ್ ಪೋಸ್ಟ್ ನಲ್ಲೇ ಪ್ರವಾಸಿಗರನ್ನು ಸಿಬ್ಬಂದಿಗಳು ತಡೆಯುತ್ತಿದ್ದಾರೆ.
ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಓದಿ:Udupi Video Incident: ಬಿಜೆಪಿಯಿಂದ ಬೃಹತ್ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ
ಜಿಲ್ಲೆಗೆ ಭೇಟಿ ನೀಡುವುದನ್ನು ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿದರೂ ಪ್ರವಾಸಿಗರು ಸ್ಪಂದಿಸದ ಹಿನ್ನೆಲೆಯಲ್ಲಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದ್ದು, ಮೂರು ದಿನ ಕಾಲ ಗಿರಿ ಪ್ರದೇಶಕ್ಕೆ ನೋ ಎಂಟ್ರಿ ಮಾಡಲಾಗಿದೆ.