Advertisement

Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ

12:46 PM Dec 16, 2024 | keerthan |

ಶಿವಮೊಗ್ಗ: ವಿಶ್ವಪ್ರಸಿದ್ದ ಜೋಗ ಜಲಪಾತ ವೀಕ್ಷಣೆಗೆ ತೆರಳಲು ಯೋಜನೆ ಹಾಕಿಕೊಂಡಿದ್ದೀರಾ? ಹಾಗಾದರೆ ನೀವು ಇದನ್ನು ಓದಬೇಕು. ಕಾಮಗಾರಿಯ ಕಾರಣದಿಂದ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಭಂದಿಸಲಾಗಿದೆ.

Advertisement

ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜನವರಿ 01 ರಿಂದ ಮಾರ್ಚ್ 15ರ ವರೆಗೆ ಮೂರು ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗ ಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

Advertisement

Udayavani is now on Telegram. Click here to join our channel and stay updated with the latest news.

Next