Advertisement

ಮಲ್ಲಿಕಟ್ಟೆಯಲ್ಲಿ ವನಮಹೋತ್ಸವ: ಅರಣ್ಯ ಸಚಿವರಿಂದ ಚಾಲನೆ

02:40 AM Jul 11, 2017 | Team Udayavani |

ಮಲ್ಲಿಕಟ್ಟೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಸರಕಾರಿ ಪ್ರವಾಸಿ ಮಂದಿರದ ಆವರಣದಲ್ಲಿ ಜು.10ರಂದು ವನಮಹೋತ್ಸವ ಜರಗಿತು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಅವರು ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

Advertisement

ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್‌ ನಾಯಕ್‌, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ  ಅಭಿಯಂತರ ಕೆ.ಟಿ.ಚಂದ್ರಶೇಖರಯ್ಯ, ಸಹಾಯಕ ಅಭಿಯಂತರ ರತ್ನಾಕರ್‌, ತಹಶೀಲ್ದಾರ್‌ ಮಹಾದೇವಯ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಶಾ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್‌  ರೊಡ್ರಿಗಸ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಸ್‌ಕ್ಲಬ್‌ ಅಧ್ಯಕ್ಷ ಡಾ| ರೊನಾಲ್ಡ್‌ ಅನಿಲ್‌ ಫೆರ್ನಾಂಡಿಸ್‌, ರಾಮಕೃಷ್ಣ ಆರ್‌., ಮಹಮ್ಮದ್‌ ಆರಿಫ್‌, ಪುಷ್ಪರಾಜ ಶೆಟ್ಟಿ ಬಿ.ಎನ್‌., ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪಿ.ಬಿ.ಹರೀಶ್‌ ರೈ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next