Advertisement

ಸಕಲ ಜೀವರಾಶಿಗೂ ಪರಿಸರವೇ ಮೂಲಾಧಾರ

02:24 PM Jun 07, 2022 | Team Udayavani |

ಧಾರವಾಡ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಸಂಘ ಮತ್ತು ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಡಿಎಚ್‌ಒ ಕಾರ್ಯಾಲಯದ ಆವರಣದಲ್ಲಿ “ಇರುವುದೊಂದೆ ಭೂಮಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸುಸ್ಥಿರವಾಗಿ ಬದುಕೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಬೈಸಿಕಲ್‌ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ನಡೆಸಲಾಯಿತು.

Advertisement

ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಬಿ. ಸಿಕರಿಗೌಡರ ಮಾತನಾಡಿ, ಎಲ್ಲ ಜೀವರಾಶಿಗಳಿಗೂ ಪರಿಸರವೇ ಮೂಲಾಧಾರ ವಾಗಿದೆ. ಪರಿಸರ ಮತ್ತು ಮಾನವ ನಾಣ್ಯದ ಎರಡು ಮುಖಗಳಿದ್ದಂತೆ. ಪರಿಸರವನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುತ್ತೇವೋ ಅಷ್ಟು ಸುರಕ್ಷಿತವಾಗಿರಬಹುದು. ಪರಿಸರ ರಕ್ಷಣೆ, ಗಿಡಮರಗಳನ್ನು ನೆಡುವುದು, ಪರಿಸರಕ್ಕೆ ಹಾನಿ ಆಗದ ಹಾಗೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಮಾತನಾಡಿ, ಪರಿಸರ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಮುಂದಿನ ಜನಾಂಗಕ್ಕೆ ಪರಿಸರವನ್ನು ಉಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಪ್ರತಿಯೊಬ್ಬರೂ ಈ ಕೆಲಸ ಮಾಡಬೇಕು. ಕಾಡು ಉಳಿಸಿದರೆ ನಮ್ಮ ನಾಡನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಗೌತಮ್‌ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಶಶಿ ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪ್ರಜೆಂಟೇಷನ್‌ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜನಜಾಗೃತಿ ಜಾಥಾ ಅಭಿಯಾನವು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಿಂದ ಪ್ರಾರಂಭವಾಗಿ ಹಳೆಯ ಎಸ್‌ಪಿ ಸರ್ಕಲ್‌, ಎಲ್‌ಇಎ ಕ್ಯಾಂಟೀನ್‌ ರಸ್ತೆ, ಎಚ್‌ ಡಿಎಂಸಿ ಆಸ್ಪತ್ರೆ, ಶಿವಾಜಿ ಸರ್ಕಲ್‌, ಬಿಆರ್‌ಟಿಎಸ್‌ ಬಸ್‌ ಸ್ಟ್ಯಾಂಡ್‌ ಮತ್ತು ಜ್ಯುಬಿಲಿ ವೃತ್ತ ಮತ್ತಿತರ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next