Advertisement
ಸೈಕಲ್ ಜಾಥಾ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎನ್‌ಸಿಸಿ, ಎನ್‌ಎಸ್‌ಎಸ್, ಐಪಿಎಂಒ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಬಳಿ ಆಯೋಜಿಸಿದ್ದ ಜಾಥಾಗೆ ಹಿರಿಯ ಸಿವಿಲ ನ್ಯಾಯಾಧೀಶ ಹಾಗೂ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರವನ್ನು ಇಂದು ನಾವು ಉಳಿಸಿದರೆ ಮುಂದಿನ ಪೀಳಿಗೆ ಸುಖವಾಗಿ ಜೀವಿಸಬಹುದು ಎಂದರು. ಹೀಗಾಗಿ ಪ್ರತಿಯೊಬ್ಬರೂ ಪರಿಸರ ರಕ್ಷಣೆ ಮಾಡಬೇಕು ಎಂದರು.
Related Articles
Advertisement
ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಡಾ. ರಾಜ್‌ಕುಮಾರ್ ಉದ್ಯಾನದಲ್ಲಿ 50 ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪರಿಸರ ಮತ್ತು ಮನುಷ್ಯ ಆರೋಗ್ಯಕ್ಕೆ ಸಮೀಪವಿದೆ. ಪರಿಸರವನ್ನು ಮನುಷ್ಯ ಹಾಳು ಮಾಡಿದಷ್ಟು ಅವನ ಆರೋಗ್ಯವೇ ಹಾಳಾಗುತ್ತದೆ. ಇದರಿಂದ ಪರಿಸರ ಸಂರಕ್ಷಣೆ ಅವಶ್ಯವಲ್ಲ, ಅನಿವಾರ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಪ್ರಕೃತಿ ಸಂರಕ್ಷಣೆ ಮತ್ತು ಗಿಡ ನೆಡಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಮೈಸೂರು ಅರಮನೆ ಮುಂಭಾಗದಿಂದ ಆರಂಭವಾದ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ಪುನಃ ಅಲ್ಲಿಯೇ ಮುಕ್ತಯವಾಯಿತು. ಪಾಲಿಕೆ ಆರೋಗ್ಯಾಧಿಕಾರಿಗಳಾದ ಡಾ. ಡಿ.ಜಿ. ನಾಗರಾಜು, ಜಯಂತ್, ಪಾಲಿಕೆ ಪರಿಸರ ಎಂಜಿನಿಯರ್ ಮೈತ್ರಿ, ಐಟಿಸಿಯ ಚಂದ್ರಶೇಖರ್ ಮತ್ತಿತರು ಇದ್ದರು.
ನಗರದ ಚಿಕ್ಕಗಡಿಯಾರದ ಬಳಿ ಆಯೋಜಿಸಿದ್ದ ಜಾಥಾಗೆ ಮಹಾನಗರ ಪಾಲಿಕೆಯ ಪರಿಸರ ಅಭಿಯಂತರೆ ಮೈತ್ರಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರವನ್ನು ಯಾವ ರೀತಿ ಸಂರಕ್ಷಿಸಬೇಕು, ಮರಗಿಡಗಳನ್ನು ಯಾಕೆ ಬೆಳೆಸಬೇಕು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಯಾವ ರೀತಿ ಸ್ವಚ್ಛವಾಗಿಸಿರಿಸಿಕೊಳ್ಳಬೇಕೆನ್ನುವುದರ ಕುರಿತು ಮಾಹಿತಿ ನೀಡಿದರು. ಅಲ್ಲೇ ಅಕ್ಕಪಕ್ಕದಲ್ಲಿರುವ ಹೂ, ಹಣ್ಣು, ತರಕಾರಿಗಳ ವ್ಯಾಪಾರಸ್ಥರಿಗೆ ಸ್ಥಳದಲ್ಲಿ ಕಸ ಬಿಸಾಡದೇ ಸ್ವಚ್ಛತೆ ಕಾಯ್ದುಕೊಳ್ಳುವಂತೆ ತಿಳಿಸಿದರು.
ಮರಬೆಳೆಸಿ, ಕಾಡು ಉಳಿಸಿ, ಮರುಬಳಕೆ ವಸ್ತುಗಳ ಬಳಕೆ ಭೂಮಿಗೆ ಮರುಜೀವ, ಇದು ನನ್ನ ನಗರ, ಇದರ ಸ್ವಚ್ಛತೆ ಕಾಪಾಡುವುದು ನನ್ನ ಕರ್ತವ್ಯ, ಸ್ವಚ್ಛತೆಯ ಹಾದಿ ದೇಶದ ಬುನಾದಿ, ವಾಯುಮಾಲಿನ್ಯ ತಡೆಗಟ್ಟಿ ಎಂಬಿತ್ಯಾದಿ ಫಲಕಗಳನ್ನು ಪ್ರದರ್ಶಿಸಿ ಸಾರ್ವ ಜನಿಕರಲ್ಲಿ ಪರಿಸರ ಕುರಿತು ಜಾಗೃತಿ ಮೂಡಿಸಿದರು. ಐಟಿಸಿ ಗ್ರೂಪ್‌ನ ಸಿಬ್ಬಂದಿ ಸೇರಿದಂತೆ ಹಲವರು ಹಾಜರಿದ್ದರು.