ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನೆಹರು ಯುವಕೇಂದ್ರ, ಗ್ರೀನ್ ಸಿಟಿ ಫೋರಂ, ರೋಟರಿ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಒಡಿಪಿ ಸಂಸ್ಥೆ, ತಾಲೂಕು ಯುವ ಒಕ್ಕೂಟ, ಅರಣ್ಯ ಇಲಾಖೆ, ಮಡಿಕೇರಿ, ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಕಾರ್ನರ್ ಫ್ರೆಂಡ್ಸ್, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಕಡಗದಾಳು ಗ್ರಾಮ ಇವರ ಸಂಯುಕ್ತಾಶ್ರಯದಲ್ಲಿ ಬೊಟ್ಟಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಅಂಗವಾಗಿ ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಿತು.
Advertisement
ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶರು ಗಿಡ ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವೂ ಪರಿಸರ ಕಾಳಜಿ ಪಾಲಿಸುವಂತಾಗಬೇಕು. ಪರಿಸರದ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
Related Articles
Advertisement
ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಮ್ಮ ಅವರು ಮನುಷ್ಯ ಸ್ವಾರ್ಥಕ್ಕಾಗಿ ಇಂದು ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ನಾವೀಗ ಹವಾಮಾನ ವೈಪರೀತ್ಯ ಕಾಣುವಂತಾಗಿದೆ ಎಂದರು.
ವೇದಿಕೆಯಲ್ಲಿ ಗ್ರೀನ್ ಸಿ.ಟಿ. ಪೋರಂನ ರತನ್ ತಮ್ಮಯ್ಯ, ಅರಣ್ಯ ಅಧಿಕಾರಿ ವಿನುತಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನೀಲಮ್ಮ, ಯುವ ಸಂಘದ ಅಧ್ಯಕ್ಷರಾದ ಕೆ.ಬಾಲನ್, ಒಡಿಪಿ ಸಂಸ್ಥೆಯ ಜಾಯ್ಸ ಮೆನೇಜಸ್, ಟಿ.ಆರ್.ವಾಸು, ಬಿ.ಡಿ.ನಾರಾಯಣ ರೈ, ಎಂ.ಎಸ್. ಯೂಸಫ್, ಜಲೀಲ್, ರಮೇಶ ರೈ, ಗೀತಾ ರಮೇಶ, ರಮೇಶ ಆಚಾರಿ, ಕೆ.ಅಯ್ಯಪ್ಪ ಕೊರವಂಡ ಮಾಚಯ್ಯ ಹಾಜರಿದ್ದರು.
ಜಯಪ್ಪ ಸ್ವಾಗತಿಸಿ, ನಿರೂಪಿಸಿದರು. ಜಾಯ್ಸ ಮಿನೇಜಸ್ ವಂದಿಸಿದರು. ಇದಾದ ಅನಂತರ ಶಾಲೆ ದೇವಸ್ಥಾನ, ಮಸೀದಿ ಮತ್ತು ರಸ್ತೆಯ ಬದಿಗಳಲ್ಲಿ ಗಿಡ ನೆಡಲಾಯಿತು.