Advertisement
ಆದರೆ ಪ್ರಸ್ತುತ ಜಗತ್ತಿನಲ್ಲಿ ಮಾನವನು ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಾಣಿಗಳ ಜೀವ ರಕ್ಷಣೆಗೆ ಹಾನಿಯುಂಟಾಗುತ್ತಿದೆ. ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿ ಉಂಟಾಗಿದೆ. ಇದಕ್ಕೆಲ್ಲ ಮೂಲ ಕಾರಣ ಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದ ಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ. ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದೂ ಆಗಿದ್ದು ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ದಿನವಾಗಿದೆ.
ಎಂಪಿಎಂ ಕಾಲೇಜು, ಕಾರ್ಕಳ