Advertisement

ತಿಳಿಗೇಡಿತನದಿಂದ ನಿಸರ್ಗ ಅಳಿವಿನತ್ತ

05:27 PM Jul 15, 2018 | Team Udayavani |

ಮೂಡಲಗಿ: ಮನುಷ್ಯ ತನ್ನ ಉಪಯೋಗಕ್ಕಾಗಿ ಪರಿಸರ ನಾಶ ಮಾಡುತ್ತಿದ್ದು, ಇದು ಮುಂದುವರಿದರೆ ಮುಂದಿನ ಪೀಳಿಗೆಗೆ ಆಪತ್ತು ಎದುರಾಗುತ್ತದೆ ಎಂದು ಧರ್ಮಸ್ಥಳ ಯೋಜನಾಧಿಕಾರಿ ದೇವರಾಜ ಹೇಳಿದರು.  ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಅಂಬೇಡ್ಕರ ಭವನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಳನ್ನು ಬೆಳೆದು ಕಾಡು ಸಂರಕ್ಷಿಸುವ ಕಾರ್ಯ ಮಾಡಬೇಕು. ಸಂಸ್ಥೆಯಿಂದ ಪಟ್ಟಣದ ವಿವಿಧ ಕಡೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿದ್ದು. ಮುಂದಿನ ದಿನಗಳಲ್ಲಿ ಜನರಿಗೆ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

Advertisement

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಗಾರ್ಡನ್‌ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಸುಧಿಧೀರ ನಾಯರ ಮಾತನಾಡಿ, ಮನುಷ್ಯನ ಉದಾಸೀನತೆ, ತಿಳಿಗೇಡಿತನದಿಂದ ನಿಸರ್ಗ ಅಳಿವಿನತ್ತ ಸಾಗುತಿದೆ. ಇಂದಿನಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಮೇಲ್ವಿಚಾರಕ ಎಂ. ಕಲ್ಮೇಶ ಸ್ವಚ್ಚತೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರಿಗೆ ಪರಿಸರ ಸಂರಕ್ಷಣೆ ಕುರಿತು ಹಮ್ಮಿಕೊಂಡ ಭಾಷಣ ಮತ್ತು ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತರಬೇತಿ ಅಧಿ ಕಾರಿ ಶೋಭಾ ಕಂಭಾರ, ಸೇವಾ ಪ್ರತಿನಿಧಿ  ವಿಜಯಲಕ್ಷ್ಮೀ, ಶ್ರೀದೇವಿ, ಒಕ್ಕೂಟದ ಅಧ್ಯಕ್ಷ ಲಲಿತ ಅಮಾತಿ, ರುಬೀನ, ಸುನಂದ, ಸಂಘದ ಸದಸ್ಯರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next