Advertisement
ಈ ಸಂಬಂಧವಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಜತೆ ಸಚಿವರು ಶುಕ್ರವಾರ ಮಹತ್ವದ ಸಭೆ ನಡೆಸಿದರು.ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು,ಎಸ್ಸೆಸ್ಸೆಲ್ಸಿ ಹಂತದಲ್ಲಿನ ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆ (ಎಸ್ಎಟಿಎಸ್)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಜತೆ ಸಂಯೋಜನೆಗೊಳಿಸುವ ಸಂಬಂಧ ಚರ್ಚಿಸಲಾಯಿತು. ಕೆಇಎ ಕೂಡ ಯಾವ ರೀತಿಯ ಮಾಹಿತಿ ಅಗತ್ಯ ಇದೆ ಎನ್ನುವುದನ್ನು ತಿಳಿಸಲಿದ್ದಾರೆ. ಎರಡೂ ಇಲಾಖೆಗಳ ಸಮನ್ವಯದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
Related Articles
Advertisement
ಈ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳಿಗೆ ನಾಲ್ಕು ಹಂತದಲ್ಲಿ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲಾಗುವುದು. ಮೊದಲು ಅಗತ್ಯ ಮಾಹಿತಿ ನೀಡುವಿಕೆ, ಎರಡನೇ ಹಂತದಲ್ಲಿ ಮೀಸಲಾತಿ, ಇದಕ್ಕೆ ಅನ್ವಯವಾಗುವ ಆರ್.ಡಿ. ಸಂಖ್ಯೆ, ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಮೀಸಲಾತಿ ಪ್ರಮಾಣ ಪತ್ರಗಳು, ವಿದ್ಯಾರ್ಥಿ ಮತ್ತು ತಂದೆಯ ಹೆಸರುಗಳು ಸರಿಯಾಗಿ ಇರುವ ಬಗ್ಗೆ ಮಾಹಿತಿ ಕೊಡಲಾಗುವುದು ಎಂದು ವಿವರಿಸಿದರು.
ಜನವರಿಯಲ್ಲಿ ಅರ್ಜಿ ತುಂಬಲು ಅವಕಾಶ, ಫೆಬ್ರವರಿಯಲ್ಲಿ ಸೀಟು ಹಂಚಿಕೆ, ದಾಖಲಾತಿ ಪರಿಶೀಲನೆ ಮತ್ತು ಇತರ ಪ್ರಕ್ರಿಯೆ ಬಗ್ಗೆ ಮನದಟ್ಟು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಈಗ ಇರುವ ಎಸ್ಎಟಿ ವ್ಯವಸ್ಥೆಯಲ್ಲಿ ಲಭ್ಯವಾಗುವ ವಿದ್ಯಾರ್ಥಿ ಸಂಬಂಧಿತ ಮಾಹಿತಿ ಅಥವಾ ವಿವರಗಳನ್ನು ಸಿಇಟಿ ಅರ್ಜಿಯಲ್ಲಿ ವಿಲೀನಗೊಳಿಸಲು ಚಿಂತಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಆಡಳಿತಾಧಿಕಾರಿ ಶಿವಕುಮಾರ್ ಇದ್ದರು.