Advertisement
ಪುಲ್ವಾಮಾದ ಮಿಟ್ರಿಗಾಮ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟಗಳು ತೀವ್ರಗೊಂಡಂತೆ, ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡದ ಮೇಲೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು.
ಆರಂಭಿಕ ಗುಂಡಿನ ಚಕಮಕಿಯ ಸಮಯದಲ್ಲಿ, ಭಯೋತ್ಪಾದಕರು ಕತ್ತಲೆಯ ಲಾಭವನ್ನು ಪಡೆದುಕೊಂಡು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ, ಭಯೋತ್ಪಾದಕರು ಮತ್ತು ಎಸ್‌ಐಎ ದಾಖಲಿಸಿರುವ ಪ್ರತ್ಯೇಕತಾವಾದಿ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಯ ಭಾಗವಾಗಿ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ) ಮಧ್ಯ ಮತ್ತು ದಕ್ಷಿಣ ಕಾಶ್ಮೀರ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ನೆರವಿನೊಂದಿಗೆ ತನಿಖಾ ಸಂಸ್ಥೆಯ ಅಧಿಕಾರಿಗಳು ಬೇಸಿಗೆ ರಾಜಧಾನಿ ಶ್ರೀನಗರ, ಅನಂತನಾಗ್, ಕುಲ್ಗಾಮ್, ಶೋಪಿಯಾನ್ ಮತ್ತು ಇತರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಎಸ್‌ಐಎಯಲ್ಲಿ ಈಗಾಗಲೇ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರಕರಣದ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಅವರು ಹೇಳಿದರು.