Advertisement

ಎಸ್ಕೇಪ್‌ ಕಾರ್ತಿಕ್‌ ಪೊಲೀಸರ ಬಲೆಗೆ

06:54 AM Mar 23, 2019 | |

ಬೆಂಗಳೂರು: ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳ ಕಾರ್ತಿಕ್‌ ಅಲಿಯಾಸ್‌ ಎಸ್ಕೇಪ್‌ ಕಾರ್ತಿಕ್‌ (30) ಜೈಲಿನಿಂದ ಹೊರ ಬಂದ ಎರಡೇ ತಿಂಗಳಲ್ಲಿ ಕೊತ್ತನೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನಿಂದ 13 ಲಕ್ಷ ರೂ. ಮೌಲ್ಯದ 400 ಗ್ರಾಂ ಚಿನ್ನಾಭರಣ ಹಾಗೂ ದುಬಾರಿ ಬೆಲೆಯ ಒಂದು ಕೆಟಿಎಂ ಬೈಕ್‌ ವಶಪಡಿಸಿಕೊಳ್ಳಲಾಗಿದೆ.

Advertisement

ಹದಿನೈದು ವರ್ಷಗಳಿಂದ ಮನೆಗಳ್ಳತನ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿರುವ ಆರೋಪಿ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಸುಮಾರು 70ಕ್ಕೂ ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಎರಡು ಬಾರಿ ಪರಪ್ಪನ ಅಗ್ರಹಾರ ಕಾರಗೃಹದಿಂದ ಪರಾರಿಯಾಗಿದ್ದ. ಹೀಗಾಗಿ, ಆತನಿಗೆ ಎಸ್ಕೇಪ್‌ ಕಾರ್ತಿಕ್‌ ಎಂದು ಕರೆಯಲಾಗುತ್ತದೆ ಎಂದು ಪೊಲೀಸರು ಹೇಳಿದರು.

ಜನವರಿಯಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ ಕಾರ್ತಿಕ್‌, ನಂತರ ಕೊತ್ತನೂರು, ಸಂಪಿಗೆಹಳ್ಳಿ ಹಾಗೂ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಮತ್ತೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಾರ್ತಿಕ್‌ ಬಂಧನದಿಂದ ಕೊತ್ತನೂರು, ರಾಮಮೂರ್ತಿ ನಗರ ಠಾಣೆಯ ತಲಾ ಒಂದು ಹಾಗೂ ಸಂಪಿಗೆಹಳ್ಳಿಯ ಎರಡು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಕಳವು ವಸ್ತುಗಳನ್ನು ಕಡಿಮೆ ವೊತ್ತಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿ, ಮೋಜಿನ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next