ಬೆಂಗಳೂರು: ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಂಡು ಬಂದಿರುವ ಕಾರಣ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು ಪಾಸಿಟಿವ್ ಬಂದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ನಿಯಮಗಳ ಪ್ರಕಾರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಂಡು ಸುರಕ್ಷಿತವಾಗಿರಿ.
ನಿಮ್ಮೆಲ್ಲರ ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಂದ ಆದಷ್ಟು ಬೇಗ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಇದನ್ನೂ ಓದಿ :ನಟ ಸುದೀಪ್ ವಿರುದ್ಧ ಬಾಡಿಗೆ ವಂಚನೆ ಪ್ರಕರಣ : ಮೇ 4ರಂದು ವಿಚಾರಣೆ!