ಬೆಂಗಳೂರು: ನಗರದಲ್ಲಿ ಕೋವಿಡ್ -19 ಸೋಂಕು ಸಮಸ್ಯೆ ಇರುವಾಗಲೇ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ಅವರನ್ನು ಸರಕಾರ ಏಕಾಏಕಿ ರಜೆಗೆ ಕಳುಹಿಸಿದ್ದು, ಇದರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಖಂಡ್ರೆ, ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ಕೋವಿಡ್ ಸಾಮಗ್ರಿ ಖರಿದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ರನ್ನ ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ. ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನ ನಿರ್ದೇಶಕರನ್ನಾಗಿಸೋ ಪ್ರಯತ್ನ ನಡೆದಿದೆ. ಸ್ವತಹ ಬೌರಿಂಗ್ ಆಸ್ಪತ್ರೆ ವೈದ್ಯರೇ ಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಧಾಕರ್ ಅವರೇ ನಿಮ್ಮ ಮೂಗಿನ ಕೆಳಗೆ ಎಲ್ಲಾ ನಡಿತಾ ಇದ್ರೂ ಏಕೆ ಸುಮ್ಮನಿದ್ದಿರಿ ಎಂದಿದ್ದಾರೆ.