Advertisement

ತಜ್ಞರ ತಂಡ ರಚಿಸಿ ಸಮುದಾಯ ಆರೋಗ್ಯ ಕಾಪಾಡಿ: ಸರ್ಕಾರಕ್ಕೆ ಖಂಡ್ರೆ ಒತ್ತಾಯ

05:23 PM Jun 03, 2021 | Team Udayavani |

ಬೀದರ್: ಕೋವಿಡ್ ನಿಂದ ಗುಣಮುಖರಾದವರಲ್ಲಿ ಹಲವು ಬಗೆಯ ರೋಗಳು ಕಾಣಿಸಿಕೊಳ್ಳುತ್ತಿದ್ದು, ಸರ್ಕಾರ ಕೂಡಲೇ ತಜ್ಞರ ಸಮಿತಿ ರಚಿಸಿ, ಅಧ್ಯಯನ ಕೈಗೊಂಡು, ಸಮುದಾಯದ ಆರೋಗ್ಯ ಕಾಪಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

Advertisement

ಕೋವಿಡ್ ಸೋಂಕಿನಿಂದ ಗುಣಮುಖರಾದ ಹಲವರಲ್ಲಿ, ಸೋಂಕು ಮತ್ತು ಅವರು ತೆಗೆದುಕೊಂಡ ಔಷಧಗಳ ಪ್ರತೀಕೂಲ ಪರಿಣಾಮದಿಂದಾಗಿ ಮಧುಮೇಹ, ರಕ್ತದೊತ್ತಡ, ಪಾರ್ಶ್ವವಾಯು, ದೃಷ್ಟಿ ದೋಷ, ಮೂತ್ರಪಿಂಡ ಮತ್ತು ಮೂತ್ರ ಕೋಶದ ಸಮಸ್ಯೆಯೇ ಮೊದಲಾದ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂಬ ವರದಿಗಳು ಬರುತ್ತಿದ್ದು, ಇದರ ಸತ್ಯಾಸತ್ಯತೆಯ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ, ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಈ ಅಧ್ಯಯನವನ್ನು ಕೇವಲ ನಗರ ಪ್ರದೇಶಕ್ಕಷ್ಟೇ ಸೀಮಿತಗೊಳಿಸದೆ, ಗ್ರಾಮೀಣ ಪ್ರದೇಶಗಳಲ್ಲೂ ಸೋಂಕಿಗೆ ಒಳಗಾದವರಲ್ಲಿ ಕಾಣಿಸಿಕೊಳ್ಳಬಹುದಾದ ದೀರ್ಘಕಾಲೀನ ಸಮಸ್ಯೆಗಳ ಬಗ್ಗೆ ರ್ಯಾಂಡಂ ತಪಾಸಣೆ ಮಾಡಿ ಸಮುದಾಯದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

ಕೋವಿಡ್ ನಿಂದ ಗುಣಮುಖರಾದ ಯುವಜನರಲ್ಲಿ ಈ ಹಿಂದೆ ಯಾವುದೇ ರೋಗ ಇಲ್ಲದಿದ್ದರೂ, ಹಲವರಲ್ಲಿ ಸಾಂಕ್ರಾಮಿಕವಲ್ಲದ ದೀರ್ಘಕಾಲೀನ ರೋಗ ಲಕ್ಷಣ ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ದೇಶದ ಭವಿಷ್ಯವಾದ ಯುವಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next