ಭಾಲ್ಕಿ: ಅಂಗನವಾಡಿ ಕಾರ್ಯಕರ್ತರು ತಮ್ಮ ಹುದ್ದೆಯ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತರ ಬೆನ್ನಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಖಂಡ್ರೆ ನಿವಾಸದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮನವಿ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಂಗನವಾಡಿ
ಕಾರ್ಯಕರ್ತರ ಪರವಾಗಿದೆ. ಅಂಗನವಾಡಿ ಕೇಂದ್ರ ಪ್ರಾರಂಭವಾಗಿದ್ದೇ, ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ. ಮಹಿಳೆಯರಿಗಾಗಿ ಸ್ತ್ರೀಶಕ್ತಿ, ಗ್ರಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ನಿಮ್ಮ ಆತಂಕ, ಯುಕೆಜಿ, ಎಲ್‍ಕೆಜಿಯಿಂದ ಅಂಗನವಾಡಿ ಮುಚ್ಚುತ್ತವೆ ಎಂದು. ಆದರೆ ಕರ್ನಾಕಟ ಸರ್ಕಾರ ಯಾವ ಅಂಗನವಾಡಿ ಕೇಂದ್ರಗಳನ್ನೂ ಮುಚ್ಚಲು ಬಿಡುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರಲ್ಲಿ ಆತ್ಮಿ ವಿಶ್ವಾಸ ತುಂಬಿದರು.
ಬಡವರ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಯುಕೆಜಿ, ಎಲ್‍ಕೆಜಿ ಶಿಕ್ಷಣ ಪಡೆಯಲು ಆಗುವುದಿಲ್ಲ ಎನ್ನುವ ಹಿತದೃಷ್ಟಿಯಿಂದ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ತೊಂದರೆ ಯಾಗದಂತೆ ಕಾರ್ಯಕ್ರಮ ರೂಪಿಸುವುದಾಗಿ ಭರವಸೆ ನೀಡಿದರು.
ಇದೇವೇಳೆ ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿಯೂ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಿಸಿದ್ದರು. ಪೊಲೀಸ್ ಇಲಾಖೆ ಅಂಗನವಾಡಿ ಕಾರ್ಯಕರ್ತರಿಗೆ ಟೆಂಟ್ ವ್ಯವಸ್ಥೆ ಮಾಡಿ ಸಹಾಯ ಹಸ್ತ ಚಾಚಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಇದನ್ನೂ ಓದಿ: Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ