Advertisement
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಯ ಬಗ್ಗೆ ಪ್ರಸ್ತಾಪ ಬಂದಾಗ ಸುಮಾರು 1 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಯೋಜನೆಗೆ ಅನುಮತಿ ನೀಡದಂತೆ ಸೂಚಿಸಿದ್ದೇನೆ. ಆದರೆ, ಅಂತಾರಾಜ್ಯಗಳಿಗೆ ಸಂಬಂಧಪಟ್ಟ ಮಹತ್ವದ ಕಾಮಗಾರಿಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಪ್ರಶ್ನಿಸಿದ್ದರು. ಅಂತಿಮವಾಗಿ 13 ಸಾವಿರ ಮರಗಳನ್ನು ಕಡಿಯಲು ಒಪ್ಪಿಗೆ ಕೊಡಿ ಎಂದು ಪರಿಷ್ಕೃತ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ, ಎಲ್ಲಿಯವರೆಗೆ ಗೋವಾ ಹಾಗೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವುದಿಲ್ಲವೋ, ಅಲ್ಲಿಯವರೆಗೆ ನಾವು ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Related Articles
Advertisement