Advertisement

ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ

10:19 PM Nov 12, 2022 | Team Udayavani |

ತುಮಕೂರು: ಎಲ್ಲ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು. ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗಬೇಕಿದೆ, ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು.

Advertisement

ನಗರದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ವಸ್ತು ಪ್ರದರ್ಶನದ ಆವರಣದಲ್ಲಿ ಅಖೀಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ಏರ್ಪಡಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಮಹಿಳಾ ಮತ್ತು ಯುವ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗಿನ ದಿನಗಳಲ್ಲಿ ಲಿಂಗಾಯತ, ವೀರಶೈವ ಬೇರೆ ಬೇರೆ ಎಂಬ ಪ್ರತಿಪಾದನೆ ಹೆಚ್ಚಾಗಿರುವುದು ಖೇದಕರ ವಿಚಾರ. ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ನಮ್ಮ ಇಬ್ಬರ ಆಚಾರ, ವಿಚಾರದಲ್ಲಿ ವ್ಯತ್ಯಾಸವಿಲ್ಲ. ಅಂಗೈಯಲ್ಲಿ ಲಿಂಗವಿಟ್ಟು ಪೂಜಿಸುವ ನಾವೆಲ್ಲರೂ ವೀರಶೈವ ಲಿಂಗಾಯತರು. ಇದೇ ಈ ಎರಡು ದಿನಗಳ ಕಾರ್ಯಾಗಾರ ಮತ್ತು ಸಮಾವೇಶದ ಪ್ರಮುಖ ಉದ್ದೇಶ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next