Advertisement

ವಕೀಲರ ವಿರುದ್ಧ ಈಶ್ವರಪ್ಪ ದೂರು

11:19 AM Jul 11, 2017 | Team Udayavani |

ಬೆಂಗಳೂರು: ಸಾಕ್ಷ್ಯಾಧಾರ ರಹಿತ ಆರೋಪಗಳನ್ನು ಮಾಡುವುದರೊಂದಿಗೆ ಮಾನಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ವಕೀಲ ಬಿ.ವಿನೋದ್‌ ಎಂಬುವವರ ವಿರುದ್ಧ ವಿಧಾನ ಪರಿಷತ್‌ ಪ್ರತಿ ಪಕ್ಷದ ನಾಯಕ ಕೆ.ಎಸ್‌ ಈಶ್ವರಪ್ಪ ಸೋಮವಾರ ನಗರದ 5ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.

Advertisement

ಹಣ ಕೊಡದ ಕಾರಣಕ್ಕಾಗಿ ಬ್ಲ್ಯಾಕ್‌ವೆುàಲ್‌ ತಂತ್ರ ಅನುಸರಿಸಿರುವ ವಿನೋದ್‌, ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ತಮ್ಮ ವಿರುದ್ಧ ಹಲವು ವರ್ಷಗಳಿಂದ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದು ತೇಜೋವಧೆಗೆ ಯತ್ನಿಸುತ್ತಿದ್ದಾರೆ.

ಅಲ್ಲದೆ ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಎಚ್‌ಎಸ್‌ಆರ್‌ಲೇಔಟ್‌ನಲ್ಲಿ ಬಿಡಿಎ ವತಿಯಿಂದ ಸಂಬಂಧಿಕರಿಗೆ ಸೈಟ್‌ಗಳನ್ನು ಕೊಡಿಸಿದ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮ ವ್ಯಕ್ತಿತ್ವಕ್ಕೆ ಚ್ಯುತಿ ತರಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಈ ನಿಟ್ಟಿನಲ್ಲಿ ಆರೋಪಿತ ವಿನೋದ್‌ ವಿರುದ್ಧ ಐಪಿಸಿ ಕಲಂ 383, 384, ಹಾಗೂ ಮಾನನಷ್ಟ ಮೊಕದ್ದಮೆ ಐಪಿಸಿ ಕಲಂ 499,500, 5001ರ ಅನ್ವಯ ಕ್ರಮಕ್ಕೆ ಆದೇಶಿಸಬೇಕು ಎಂದು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next