Advertisement
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಕ್ಷದ ಒಂದು ಬಣ ಸಂಘ-ಪರಿವಾರದ ನಾಯಕರ ಮೂಲಕ ಈ ಪ್ರಕ್ರಿಯೆ ಪ್ರಾರಂಭಿಸಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಖುದ್ದು ಈಶ್ವರಪ್ಪನವರೇ ಹಿರಿಯರ ಜತೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು ವರಿಷ್ಠರು ಒಪ್ಪಿದರೆ ಶೀಘ್ರ ಘರ್ ವಾಪ್ಸಿ ನಿಶ್ಚಿತ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಬಣ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಅಂದುಕೊಂಡಷ್ಟು ಸರಳವಾಗಿ ವಿವಾದ ಇತ್ಯರ್ಥವಾಗುವ ಸಾಧ್ಯತೆ ಕಡಿಮೆ.
Related Articles
Advertisement
ಸಂತೋಷ್ ಅಸಮಾಧಾನ?ಈ ಎರಡೂ ವಾದಗಳು ಏನೇ ಇದ್ದರೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕಿದೆ. ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಈಶ್ವರಪ್ಪ ಪರ ನಿಲುವು ತೆಗೆದುಕೊಳ್ಳಬಹುದೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಪದವೀಧರ ಕ್ಷೇತ್ರದ ಚುನಾವಣ ಪ್ರಚಾರಕ್ಕಾಗಿ ಉಡುಪಿಗೆ ಬಂದಿದ್ದ ಸಂದರ್ಭದಲ್ಲಿ ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರ ವಿರುದ್ಧವೂ ತಮ್ಮ ಭಾಷಣದಲ್ಲಿ ಸಂತೋಷ್ ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಈ ಪ್ರಸ್ತಾವವನ್ನು ಸಂತೋಷ್ ರಾಷ್ಟ್ರೀಯ ನಾಯಕರ ಬಳಿ ಪ್ರಸ್ತಾವಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಬಿಎಸ್‌ವೈ ಮೇಲೆ ದ್ವೇಷವಿಲ್ಲ?
ನಾನು ಯಡಿಯೂರಪ್ಪ ವಿರುದ್ಧ ಮಾತ್ರ ಮಾತ ನಾಡಿದ್ದೇನೆ. ಆದರೆ ನನ್ನ ಮಗ ಕಾಂತೇಶ್ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ ವಿರುದ್ಧ ನನಗೆ ಯಾವುದೇ ದ್ವೇಷವೂ ಇಲ್ಲ ಎಂದು ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.