Advertisement

ಮಲೆ ಮಹದೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ

10:37 PM Jun 20, 2020 | Sriram |

ಹನೂರು(ಚಾಮರಾಜನಗರ): ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಮಲೆ ಮಹದೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

Advertisement

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ತಡರಾತ್ರಿಯೇ ಆಗಮಿಸಿ ರಾಷ್ಟ್ರಪತಿ ಭನವದಲ್ಲಿ ವಾಸ್ತವ್ಯ ಹೂಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಬೆಳ್ಳಂಬೆಳಗ್ಗೆಯೇ ಶ್ರೀ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರದಲ್ಲಿಯೇ ಬೆಳಗ್ಗಿನ ಉಪಹಾರ ಸೇವಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಕೊಳ್ಳೇಗಾಲ   ಹನೂರು ತಾಲೂಕಿನಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಪರಿಶೀಲನೆಗಾಗಿ ಸರಗೂರಿನತ್ತ ಪ್ರಯಾಣ ಬೆಳೆಸಿದರು.

ಅಭಿವೃದ್ಧಿ ಕಾರ್ಯಗಳ ಮಾಹಿತಿ ಸಂಗ್ರಹ: ಇದೇ ವೇಳೆ ಸಚಿವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿಗಳ ಕೈಪಿಡಿಯನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದವತಿಯಿಂದ ಅನುದಾನ ನೀಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ತುರ್ತು ಅವಶ್ಯಕವಾದ ಕಾಮಗಾರಿಗಳನ್ನು ಪ್ರಾಧಿಕಾರದವತಿಯಿಮದಲೇ ಕೈಗೊಳ್ಳಿ, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಸಚಿವರಿಗೆ ದರ್ಶನ ಭಾಗ್ಯ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪೂಜಾ ಕೈಂಕರ್ಯಗಳಲ್ಲಿ ಭಕ್ತಾದಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತು ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮಸ್ಯೆಯಾಗುವುದನ್ನು ಮನಗಂಡ ಜಿಲ್ಲಾಡಳಿತ ಜೂನ್ 19 ರಿಂದ 21ರವರೆಗೆ 3 ದಿನಗಳ ಕಾಲ ಮಾದಪ್ಪನ ದರ್ಶನವನ್ನು ನಿಷೇಧಿಸಲಾಗಿತ್ತು. ಅಲ್ಲದೆ ಶ್ರೀ ಕ್ಷೇತ್ರದಲ್ಲಿ ಕೋವಿಡ್ 19 ನಿಂದಾಗಿ ರಾತ್ರಿ ವಾಸ್ತವ್ಯ ಹೂಡುವುದು ಮತ್ತು ಕೊಠಡಿಗಳನ್ನು ನೀಡುವುದನ್ನು ನಿಷೇಧಿಸಲಾಗಿದ್ದರೂ ಸಚಿವರು ಮತ್ತು ಅವರ ಹಿಂಬಾಲಕರಿಗೆ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಿ ಕೊಠಡಿಗಳನ್ನು ನೀಡಿದ್ದಕ್ಕೆ ಮಲೆ ಮಾದಪ್ಪನ ಭಕ್ತಗಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ದೇವರ ದರ್ಶನಕ್ಕೂ ಉಳ್ಳವರಿಗೊಂದು ನ್ಯಾಯ ಬಡ ಭಕ್ತಾದಿಗಳಿಗೆ ಮತ್ತೊಂದು ನ್ಯಾಯ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next